ನಿರೀಕ್ಷಣಾ ಜಾಮೀನಿಗಾಗಿ ತಲೆಮರೆಸಿಕೊಂಡಿರುವ ಬಾಂಬ್ ನಾಗ ಅರ್ಜಿ
ಮಾಜಿ ಕಾರ್ಪೋರೇಟರ್ ಮತ್ತು ರೌಡಿ ಶೀಟರ್ ನಾಗರಾಜ್ ಅಲಿಯಾಸ್ ಬಾಂಬ್ ನಾಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ...

Published On :
ಬೆಂಗಳೂರು: ಮಾಜಿ ಕಾರ್ಪೋರೇಟರ್ ಮತ್ತು ರೌಡಿ ಶೀಟರ್ ನಾಗರಾಜ್ ಅಲಿಯಾಸ್ ಬಾಂಬ್ ನಾಗ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ನಿಷೇಧಗೊಂಡಿರುವ 500 ಮತ್ತು 1000 ಮುಖಬೆಲೆಯ ಕೋಟ್ಯಾಂತರ ರುಪಾಯಿ ಮೊತ್ತದ ಹಣವನ್ನು ಅಡಗಿಸಿಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ತನ್ನ ಮನೆಯ ಮೇಲೆ ಪೊಲೀಸ್ ದಾಳಿಯಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದು ಇದೀಗ ಬಂಧನದ ಭೀತಿ ಎದುರಿಸುತ್ತಿರುವ ಬಾಂಬ್ ನಾಗ ಸ್ಥಳೀಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿಯಲ್ಲಿ ಬಾಂಬ್ ನಾಗ, ಸಾರ್ವಜನಿಕ ವಲಯದಲ್ಲಿ ನನ್ನ ಮೇಲೆ ಕಳಂಕರಹಿತವಾಗಿದ್ದು ಆದರೆ ಪೊಲೀಸರು ನನ್ನ ತೇಜೋವಧೆ ಮಾಡುತ್ತಿದ್ದಾರೆ. ನನ್ನ ಮನೆಯಲ್ಲಿ ಕೋಟ್ಯಾಂತರ ಮೊತ್ತದ ಹಣ ವಶಪಡಿಸಿಕೊಂಡಿರುವುದಕ್ಕೆ ನನಗೂ ಯಾವುದೇ ಸಂಬಂಧವಿಲ್ಲ. ಆದರೆ ನನ್ನನ್ನು ಕಳಂಕಿತನಾಗಿಸಲು ನನ್ನ ವಿರುದ್ಧ ಷಡ್ಯಂತ ನಡೆದಿದೆ ಎಂದು ಬರೆದಿದ್ದಾನೆ.
ನಗದು ಪರಿವರ್ತನೆ ಪ್ರಕರಣದ ಆರೋಪಿ ಉಮೇಶ್ ಎಂಬುವರು ಏಪ್ರಿಲ್ 7ರಂದು ಬಾಂಬ್ ನಾಗ ವಿರುದ್ಧ ದೂರು ನೀಡಿದ್ದರು. ಈ ದೂರಿನನ್ವಯ ನಾಗರಾಜ ಅವರ ಮೇಲೆ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಅವರ ಮನೆಯಿಂದ 14.80 ಕೋಟಿ ಮೊತ್ತದ 500 ಮತ್ತು 1000 ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದವು. ಈ ವೇಳೆ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ನಾಗ ಪರಾರಿಯಾಗಿದ್ದು ಪೊಲೀಸರು ಆತನ ಬೆನ್ನು ಬಿದ್ದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rowdy sheeterನಾಪತ್ತೆಬೆಂಗಳೂರು ಪೊಲೀಸ್ರೌಡಿ ಶೀಟರ್Bengaluru policeanticipatory bailನಿರೀಕ್ಷಣಾ ಜಾಮೀನುAbscondingV Nagarajವಿ. ನಾಗರಾಜ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


