ಮೇವು ಕೊರತೆ: ರೈತರಿಗೆ ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯತೆ
ರಾಜ್ಯದಲ್ಲಿ ಬರಗಾಲ ತೀವ್ರವಾಗುತ್ತಿದ್ದು, ಹಲವು ಭಾಗಗಳಲ್ಲಿ ಮೇವು ಕೊರತೆ ಎದುರಾಗಿರುವುದರಿಂದ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ.

Published On :
ಯಾದಗಿರಿ: ರಾಜ್ಯದಲ್ಲಿ ಬರಗಾಲ ತೀವ್ರವಾಗುತ್ತಿದ್ದು, ಹಲವು ಭಾಗಗಳಲ್ಲಿ ಮೇವು ಕೊರತೆ ಎದುರಾಗಿರುವುದರಿಂದ ರೈತರು ಜಾನುವಾರುಗಳನ್ನು ಮಾರಾಟ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಯಾದಗಿರಿಯಲ್ಲಿಯೂ ಇದೇ ಪರಿಸ್ಥಿತಿ ಎದುರಾಗಿದ್ದು, ಅತ್ಯಂತ ಕಡಿಮೆ ದರಕ್ಕೆ ಜಾನುವಾರುಗಳನ್ನು ಮಾರಾಟ ಮಾಡಲು ರೈತರು ಮುಂದಾಗುತ್ತಿದ್ದಾರೆ.
ಜಾನುವಾರುಗಳಿಗೆ ಮೇವು ಹಾಗೂ ನೀರು ಪೂರೈಕೆ ಮಾಡಲು ಸಾಧ್ಯವಾಗದೇ ಜಾನುವಾರುಗಳನ್ನು ಮಾರಾಟ ಮಾಡುತ್ತಿದ್ದಾರೆ. ಯಾದಗಿರಿಯ 3 ತಾಲೂಕಿನ 270 ಪ್ರಮುಖ ಹಾಗೂ ಸಣ್ಣ ನೀರಿನ ಸೆಲೆಗಳು ಬತ್ತಿಹೋಗಿದ್ದು ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಎಪಿಎಂಸಿ ಮಾರುಕಟ್ಟೆಯಲ್ಲಿ ನೂರಾರು ರೈತರು 30-40 ಸಾವಿರ ರೂ ಬೆಲೆ ಬಾಳುವ ತಮ್ಮ ಜಾನುವಾರುಗಳನ್ನು ಕೇವಲ 10-15 ಸಾವಿರಕ್ಕೆ ಮಾರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜಾನುವಾರುಗಳನ್ನು ಖರೀದಿಸಲು ರೈತರು ಮುಂದಾಗುತ್ತಿಲ್ಲ. ಬದಲಾಗಿ ಕಸಾಯಿಖಾನೆಗಳಿಗೆ ಜಾನುವಾರುಗಳು ಮಾರಾಟವಾಗುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


