ರಾಜ್ಯ

'ಸಾಯಲಿ' ಎಂದು ಹೇಳಿಲ್ಲ, ಪ್ರಧಾನಿ ಬಗ್ಗೆ ಅಪಾರ ಗೌರವವಿದೆ: ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

'ಸಾಯಲಿ' ಎಂದು ಹೇಳಿಲ್ಲ, ಪ್ರಧಾನಿ ಬಗ್ಗೆ ಅಪಾರ ಗೌರವವಿದೆ: ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ
ಬಸವರಾಜ ರಾಯರೆಡ್ಡಿ
Published On :
ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ನೀಡಿದ್ದ ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ಸಾಯಲಿ ಬಿಡಿ ಎಂದು ಹೇಳಿಲ್ಲ. ಮೋದಿ ಅವರ ಬಗ್ಗೆ ಅಪಾರ ಗೌರವವಿದೆ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ. 
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ರಾಯರೆಡ್ಡಿ, ಅಧಿಕಾರ ಬೇಕು ಎನ್ನುವುದಾದರೆ ತ್ಯಾಗಕ್ಕೆ ಸಿದ್ಧವಿರಬೇಕು ಎಂದು ನಾನು ಹೇಳಿದ್ದೆ. ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಪಾರ ಗೌರವವಿದೆ ಅವರ ಕುರಿತು ಸಾಯಲಿ ಬಿಡಿ ಎಂದು ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 
ಮಾರ್ಮಿಕವಾಗಿ ಹೇಳಿದ್ದ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಪ್ರಚಾರ ಕೊಟ್ಟ ಮಾಧ್ಯಮಗಳಿಗೆ ಧನ್ಯವಾದಗಳು ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.