ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆ ಇಲ್ಲ: ಸಾರಾಗೋವಿಂದು
ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.

ಬೆಂಗಳೂರು: ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಅವರೊಂದಿಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸತ್ಯರಾಜ್ ಕ್ಷಮೆ ಯಾಚನೆ ಬಳಿಕ ತಮಿಳುನಾಡಿನವಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲಾಗಿದೆ ಎಂಬ ವರದಿಗಳು ಕೇಳಿಬಂದಿದ್ದವು. ಈ ಬಗ್ಗೆ ದಕ್ಷಿಣ ಭಾರತ ಚಲನಚಿತ್ರ ಒಕ್ಕೂಟವನ್ನು ನಾನು ಸಂಪರ್ಕಿಸಿ ಮಾತನಾಡಿದ್ದೆ. ಈ ವೇಳೆ ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಂಸ್ಥೆಯ ಪದಾಧಿಕಾರಿಗಳು ಭರವಸೆ ನೀಡಿದ್ದಾರೆ. ಒಂದು ವೇಳೆ ಕನ್ನಡ ಚಿತ್ರ ಪ್ರದರ್ಶನಕ್ಕೆ ಅಲ್ಲಿ ತೊಂದರೆಯಾದ ಕುರಿತು ತಮಗೆ ತಿಳಿದರೆ ಖಂಡಿತ ಕರ್ನಾಟಕದಲ್ಲಿಯೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.
ತಮಿಳು ಚಿತ್ರದ ಪೋಸ್ಚರ್ ಹರಿದ ಪ್ರತಿಭಟನಾಕಾರರು
ಇನ್ನು ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನ ತಡೆಯಲಾಗಿದೆ ಎಂಬ ವರದಿ ಮೇರೆಗೆ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪಡಿಸಲು ಕೆಲ ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ನಗರದ ಸಂಜಯ್ ನಗರದಲ್ಲಿರುವ ಪುಷ್ಪಾಂಜಲಿ ಥಿಯೇಟರ್ ಆವರಣದಲ್ಲಿ ಹಾಕಲಾಗಿದ್ದ ತಮಿಳು ಚಿತ್ರವೊಂದರ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


