ದೇಶದ ಎಲ್ಲಾ ರಾಜ್ಯಗಳಿಗಿಂತ ಕರ್ನಾಟಕಕ್ಕೆ ಅತಿ ಕಡಿಮೆ ಅನುದಾನ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ
ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ರಾಜ್ಯಗಳಿಗೆ ನೀಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಗಣನೀಯ ಪ್ರಮಾಣದಲ್ಲಿ ಕಡಿತ ...

Published On :
ಬೆಂಗಳೂರು: ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ರಾಜ್ಯಗಳಿಗೆ ನೀಡಿರುವ ಅನುದಾನದಲ್ಲಿ ಕರ್ನಾಟಕಕ್ಕೆ ಗಣನೀಯ ಪ್ರಮಾಣದಲ್ಲಿ ಕಡಿತ ಉಂಟಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಮೂರನೇ ಆಡಳಿತ ಮಂಡಳಿ ಸಭೆಯಲ್ಲಿ ಅವರು ಮಾತನಾಡಿದ ಅವರು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯೂ ಸೇರಿದಂತೆ ಕೇಂದ್ರ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಹಂಚಿಕೆಯಾಗಿರುವ ಅನುದಾನದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿತ ಉಂಟಾಗಿದೆ, ಕೃಷಿಯನ್ನೇ ಆಧರಿಸಿರುವ ಕರ್ನಾಟಕದಲ್ಲಿ ಕಳೆದ ಆರು ವರ್ಷಗಳಿಂದ ಭೀಕರ ಬರಗಾಲ ತಲೆದೋರಿದ್ದು, ರೈತರ ಸ್ಥಿತಿ ಚಿಂತಾಜನಕವಾಗಿದೆ. ಆದರೆ, ಕೇಂದ್ರ ಸರ್ಕಾರವು ರಾಜ್ಯ ಪ್ರಕೃತಿ ವಿಕೋಪ ನಿಧಿಗೆ (ಎಸ್‌ಡಿಆರ್‌ಎಫ್) ಅನುದಾನ ಹಂಚಿಕೆ ಮಾಡುವಲ್ಲಿ ತೀವ್ರ ತಾರತಮ್ಯ ನೀತಿ ಅನುಸರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
2015–20ನೇ ಸಾಲಿಗಾಗಿ ರಾಜ್ಯಕ್ಕೆ ಮಂಜೂರು ಮಾಡಿರುವ ರಾಜ್ಯ ಪ್ರಕೃತಿ ವಿಕೋಪ ನಿಧಿಯು ಕೇವಲ ರು 1,375 ಕೋಟಿ. ಇದು ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಅತಿ ಕಡಿಮೆ ಅನುದಾನವಾಗಿದೆ ಎಂದು ಅವರು ದೂರಿದರು. ಹಿಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರು 7,097.89 ಕೋಟಿ ಮೌಲ್ಯದ ಬೆಳೆ ನಷ್ಟವಾಗಿದ್ದು, ರು. 3,310 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಂಜೂರು ಮಾಡುವಾಗ ರಾಜ್ಯದ ಸಂಕಷ್ಟಕ್ಕೆ ಕೇಂದ್ರವು ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಕಳೆದ ವರ್ಷ ಬರದಿಂದಾಗಿ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ರು. 17,193 ಕೋಟಿ ಮೌಲ್ಯದ ಬೆಳೆ ನಷ್ಟ ಆಗಿದ್ದು, ರಾಷ್ಟ್ರೀಯ ಪ್ರಕೃತಿ ವಿಕೋಪ ನಿಧಿ (ಎನ್‌ಡಿಆರ್‌ಎಫ್) ಅಡಿ ನಿಯಮಾನುಸಾರ ರು. 4,702.54 ಕೋಟಿ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ, ರಾಜ್ಯಕ್ಕೆ ಮಂಜೂರಾದ ಮೊತ್ತ ಕೇವಲ ರು. 1,685.54 ಕೋಟಿ ಎಂದು ಅವರು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


