ಹೋಟೆಲ್ ಗಳಲ್ಲಿ ಸೇವಾಶುಲ್ಕ ವಿಧಿಸಿದರೆ ಕಾನೂನು ಕ್ರಮ: ಯು.ಟಿ. ಖಾದರ್ ಎಚ್ಚರಿಕೆ
ಮುಂಬರುವ ದಿನಗಳಲ್ಲಿ ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ...

Published On :
ಬೆಂಗಳೂರು: ಮುಂಬರುವ ದಿನಗಳಲ್ಲಿ ಹೋಟೆಲ್ ಮತ್ತು ರೆಸ್ಟೊರೆಂಟ್‌ಗಳಲ್ಲಿ ಸೇವಾ ಶುಲ್ಕ ವಿಧಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ ಖಾದರ್ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಗಳಲ್ಲಿ ಸೇವಾ ಶುಲ್ಕ ವಿಧಿಸುವುದಿಲ್ಲ ಎಂಬ ಫಲಕ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ ಅದರಂತೆ ಹೋಟೆಲ್ ಗಳಲ್ಲಿ ಯಾವುದೇ ರೀತಿಯ ಸೇವಾ ಶುಲ್ಕ ವಿಧಿಸುವ ಆಗಿಲ್ಲ ಎಂದು ಹೇಳಿದ್ದಾರೆ.
ಈ ಸಂಬಂಧ ಕೇಂದ್ರ ಸರ್ಕಾರ ಇದೇ 21ರಂದು ಹೊರಡಿಸಿರುವ ಸುತ್ತೋಲೆ ಬಗ್ಗೆ ಗ್ರಾಹಕರು ಮತ್ತು ಹೋಟೆಲ್ ಮಾಲೀಕರಿಗೆ ಅರಿವು ಮೂಡಿಸಲು ತಮ್ಮ ಇಲಾಖೆ ಕ್ರಮ ಕೈಗೊಳ್ಳಲಿದೆ ಎಂದರು.
ರಾಜ್ಯದ ಕೆಲವು ಹೋಟೆಲ್, ರೆಸ್ಟೊರೆಂಟ್‌ಗಳಲ್ಲಿ ಶೇ6 ರಿಂದ ಶೇ 8 ವರೆಗೆ ಸೇವಾಶುಲ್ಕ ವಸೂಲಿ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಹೋಟೆಲ್ ಅಥವಾ ರೆಸ್ಟೋರೆಂಟ್ ಗಳಲ್ಲಿ ಸೇವಾಶುಲ್ಕಕ್ಕೆ ಬೇಡಿಕೆ ಇಟ್ಟರೇ ಅಥವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


