ರಾಜ್ಯ

'ಮಾಸ್ತಿ ಗುಡಿ' ದುರಂತ: ಚಿತ್ರ ತಂಡದ ಆರು ಮಂದಿ ವಿರುದ್ಧ ಚಾರ್ಜ್ ಶೀಟ್

ಕನ್ನಡ ಚಿತ್ರರಂಗದ ಇಬ್ಬರು ಖಳನಟರನ್ನು ಬಲಿ ಪಡೆದ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ...

'ಮಾಸ್ತಿ ಗುಡಿ' ದುರಂತ: ಚಿತ್ರ ತಂಡದ ಆರು ಮಂದಿ ವಿರುದ್ಧ ಚಾರ್ಜ್ ಶೀಟ್
ಅನಿಲ್-ಉದಯ್
Published On :
ಮಾಗಡಿ: ಕನ್ನಡ ಚಿತ್ರರಂಗದ ಇಬ್ಬರು ಖಳನಟರನ್ನು ಬಲಿ ಪಡೆದ ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ದುರಂತಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ಸೇರಿದಂತೆ ಆರು ಮಂದಿ ವಿರುದ್ಧ ಗುರುವಾರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಮಾಸ್ತಿ ಗುಡಿ' ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಲಸಮಾಧಿಯಾದ ಖಳನಟರಾದ ಉದಯ್ ಮತ್ತು ಅನಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸರು ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿವರ್ಮ, ಪೈಲಟ್ ಸೇರಿದಂತೆ ಆರು ಜನರ ವಿರುದ್ಧ ಸುಮಾರು 400 ಪುಟಗಳ ಚಾರ್ಜ್ ಶೀಟ್ ಅನ್ನು ಇಂದು ಮಾಗಡಿಯ ಜೆಎಂಎಫ್ ಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. 
ಪ್ರಕರಣದಲ್ಲಿ ಚಿತ್ರದ ನಿರ್ಮಾಪಕ ಸುಂದರ್ ಗೌಡ ಅವರು ಪ್ರಮುಖ ಆರೋಪಿಯಾಗಿದ್ದು, ನಿರ್ದೇಶಕ ನಾಗಶೇಖರ್ ಎರಡನೇ ಆರೋಪಿ, ಸಹ ನಿರ್ದೇಶಕ ಮೂರನೇ ಆರೋಪಿ, ಸಾಹಸ ನಿರ್ದೇಶಕ ರವಿವರ್ಮ ಅವರನ್ನು ನಾಲ್ಕನೇ ಆರೋಪಿಯನ್ನಾಗಿ ಮಾಡಲಾಗಿದೆ.
ಕಳೆದ ವರ್ಷ ನವೆಂಬರ್ ನಲ್ಲಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಶೂಟಿಂಗ್ ನಡೆಯುತ್ತಿದ್ದ ವೇಳೆ ದುನಿಯಾ ವಿಜಯ್. ಅನಿಲ್ ಹಾಗೂ ಉದಯ್ ಮೂವರು ಹೆಲಿಕಾಪ್ಟರ್ ನಿಂದ ಕೆರೆಗೆ ಜಿಗಿಯುತ್ತಾರೆ. ಇವರಲ್ಲಿ ದುನಿಯಾ ವಿಜಯ್ ಈಜಿದ್ದು ಅವರನ್ನು ತೆಪ್ಪದ ಮೂಲಕ ದಡಕ್ಕೆ ಕರೆತರಲಾಗಿತ್ತು. ಆದರೆ ಅನಿಲ್ ಮತ್ತು ಉದಯ್ ಈಜಲು ಬರದೇ ನೀರು ಪಾಲಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.