ರಾಜ್ಯ

ಮಂಡ್ಯದಲ್ಲಿ ಓರ್ವ ರೈತ ಆತ್ಮಹತ್ಯೆ, ಸಚಿವರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮತ್ತೊಬ್ಬ ರೈತ

ಓರ್ವ ರೈತ ಜಿಲ್ಲಾ ಉಸ್ತುವಾರಿ ಸಚಿವರ ಎದುರೇ ಶನಿವಾರ ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೊಬ್ಬ ರೈತ ಆತ್ಮಹತ್ಯೆಗೆ....

ಮಂಡ್ಯದಲ್ಲಿ ಓರ್ವ ರೈತ ಆತ್ಮಹತ್ಯೆ, ಸಚಿವರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಮತ್ತೊಬ್ಬ ರೈತ
ಸಾಂದರ್ಭಿಕ ಚಿತ್ರ
Published On :
ಮಂಡ್ಯ: ಓರ್ವ ರೈತ ಜಿಲ್ಲಾ ಉಸ್ತುವಾರಿ ಸಚಿವರ ಎದುರೇ ಶನಿವಾರ ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೊಬ್ಬ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಲಗೆರೆಹಳ್ಳಿಯಲ್ಲಿ ನಡೆದಿದೆ.
ಇಂದು ಮಂಡ್ಯದಲ್ಲಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣಪ್ಪ ಅವರ ಎದುರೆ ರೈತ ಅಪ್ಪಾಜಿ ಗೌಡ ಅವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದರು. 
ಕಾಲುವೆಗಾಗಿ ಜಮೀನು ನೀಡಿದ್ದ ಅಪ್ಪಾಜಿ ಗೌಡ, ಕಳೆದ ಆರು ತಿಂಗಳಿಂದ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲದೆ ಬೇಸತ್ತಿದ್ದರು. ಹೀಗಾಗಿ ಸಚಿವರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಅಪ್ಪಾಜಿ ಗೌಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈತ ಆತ್ಮಹತ್ಯೆ ಘಟನೆಯ ನಂತರ ಎಚ್ಚೆತ್ತುಕೊಂಡ ಸಚಿವರು, ಆ ರೈತನಿಗೆ ಈ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವಲಗೆರೆಹಳ್ಳಿಯಲ್ಲಿ ಸಾಲಬಾಧೆಯಿಂದ 62 ವರ್ಷದ ರೈತ ಮರಿಗೌಡ ಅವರು ಮರಕ್ಕೆ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಎರಡು ಎಕರೆ ಜಮೀನಿನಲ್ಲಿ ಭತ್ತ, ಕಬ್ಬು ಹಾಗೂ ರಾಗಿ ಬೆಳೆಯುತ್ತಿದ್ದ ಮರಿಗೌಡ ಅವರು, ಈ ಬಾರಿ ಬೆಳೆ ನಷ್ಟದಿಂದಾಗಿ ನಾಲ್ಕು ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.