ಮೇ 4ರಂದು ಮುಷ್ಕರ ಕೈ ಬಿಟ್ಟ ಸರ್ಕಾರಿ ನೌಕರರು
ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿರುವುದರಿಂದ ....

Published On :
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿರುವುದರಿಂದ ಮೇ 4 ರಂದು ಕರೆ ನೀಡಿದ್ದ ನಿರಶನ ಮತ್ತು ಮುಷ್ಕರವನ್ನು ಕೈಬಿಡಲು ತೀರ್ಮಾನಿಸಲಾಗಿದೆ ಎಂದು ನೌಕರರ ಸಂಘದ ಅಧ್ಯಕ್ಷ ಬಿ.ಪಿ.ಮಂಚೇಗೌಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಿ ನೌಕರರಿಗೆ ಸಮನಾದ ವೇತನ, ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ ನೀಡುವಂತೆ ಬೇಡಿಕೆ ಸಲ್ಲಿಸಿದ ಹಿನ್ನೆಲೆಯಲ್ಲಿ ಶೇಕಡಾ 30ರಷ್ಟು ಮಧ್ಯಂತರ ಪರಿಹಾರ ಮಂಜೂರಾತಿ ಬಗ್ಗೆ ಆರ್ಥಿಕ ಇಲಾಖೆಯಲ್ಲಿ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಸದ್ಯದಲ್ಲೇ ಆದೇಶ ಹೊರಬೀಳಲಿದೆ. ಆದರೆ ನಿವೃತ್ತ ನೌಕರರ ಸಂಘವೊಂದು ಪ್ರಚಾರಕ್ಕಾಗಿ ಧರಣಿಗೆ ಕರೆ ನೀಡಿದ್ದು, ಅಪ್ರಸ್ತುತ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


