ರಾಜ್ಯ

ದಿಡ್ಡಳ್ಳಿಯಿಂದ ತೆರಳಲು ಬುಡಕಟ್ಟು ಜನಾಂಗದವರ ನಿರಾಕರಣೆ

ಜಿಲ್ಲಾಡಳಿತ ಹಂಚಿಕೆ ಮಾಡಿರುವ ನಿವೇಶನಗಳಿಗೆ ತೆರಳಲು ಕೆಲ ಆದಿವಾಸಿ ಪಂಗಡದ ಜನರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಾವು ಆ ಜಾಗ ..

ದಿಡ್ಡಳ್ಳಿಯಿಂದ ತೆರಳಲು ಬುಡಕಟ್ಟು ಜನಾಂಗದವರ ನಿರಾಕರಣೆ
ದಿಡ್ಡಳ್ಳಿ
Published On :
ಮಡಿಕೇರಿ: ಜಿಲ್ಲಾಡಳಿತ ಹಂಚಿಕೆ ಮಾಡಿರುವ ನಿವೇಶನಗಳಿಗೆ ತೆರಳಲು ಕೆಲ ಆದಿವಾಸಿ ಪಂಗಡದ ಜನರು ವಿರೋಧ ವ್ಯಕ್ತ ಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಾವು ಆ ಜಾಗ ಬಿಟ್ಟು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಿಡ್ಡಳ್ಳಿ ಪುನರ್ ವಸತಿ ಸಮಿತಿ ಸಭೆಯ ಮುಖ್ಯಸ್ತಱಾದ ಸ್ವಾಮಿಯಪ್ಪ ಮತ್ತು ಅನಿತಾ ಅವರೊಂದಿಗೆ ಸಭೆ ನಡೆಸಿ ಅವರನ್ನು ಅಲ್ಲಿಂದ ಬಸವನಹಳ್ಳಿ ಹಾಗೂ ಬ್ಯಾಡಗೊಟ್ಟ-ಮದಲಾಪುರದಲ್ಲಿ ನಿರ್ಮಿಸಲಾಗಿರುವ ಮನೆಗಳಿಗೆ ತೆರಳಲು ಒಪ್ಪಿಸಲಾಗಿತ್ತು.
181 ನಿವೇಶನಗಳಿರುವ ಲೇಔಟ್ ನಲ್ಲಿ 30*30 ಅಳತೆಯಲ್ಲಿ 170 ಮನೆಗಳನ್ನು ನಿರ್ಮಿಸಲಾಗಿದೆ. ಆದರೆ ವಿರಾಜಪೇಟೆಯ ಕೆಡಮುಳ್ಳೂರಿನಲ್ಲಿ ಜಿಲ್ಲಾಡಳಿತದವತಿಯಿಂದ ನಿರ್ಮಿಸಿರುವ ಮನೆಗಳಿಗೆ ತೆರಳಲು ಆದಿವಾಸಿ ಜನಾಂಗ ನಿರಾಕರಿಸಿದೆ. ಇದು ಗುಡ್ಡಗಾಡು ಪ್ರದೇಶವಾಗಿದ್ದು, ವಾಸಿಸಲು ಯೋಗ್ಯವಾಗಿಲ್ಲ ಎಂಬ ಕಾರಣ ನೀಡಿದ್ದಾರೆ,
ದಿಡ್ಡಳ್ಳಿ ನಿರಾಶ್ರಿತ ಗಿರಿಜನರಿಗೆ ಮೂಲಭೂತ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದು ಜಿಲ್ಲಾಡಳಿತ ಭರವಸೆ ನೀಡಿದೆ.  ನಿವೇಶನ ಹಕ್ಕುಪತ್ರ ಪಡೆದ ನಂತರ ಮನೆ ನಿರ್ಮಾಣ, ಯುವ ಜನರು ಸ್ವ ಉದ್ಯೋಗ ಕೈಗೊಳ್ಳಲು ಕೌಶಲ್ಯ ತರಬೇತಿ ಹಾಗೂ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್ ಕೊಡಿಸಿ ಉದ್ಯೋಗ ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.