ಡಿಕೆಶಿ ಮೇಲೆ ಐಟಿ ದಾಳಿ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ: ಗುಜರಾತ್ ಕಾಂಗ್ರೆಸ್ ಶಾಸಕರು
ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ ಎಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ...

Published On :
ಬೆಂಗಳೂರು: ಐಟಿ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ ಎಂದು ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರು ಆರೋಪಿಸಿದ್ದಾರೆ.
ಕರ್ನಾಟಕ ಇಂದನ ಸಚಿವ ಡಿ.ಕೆ ಶಿವಕುಮಾರ್ ನಿವಾಸ ಸೇರಿದಂತೆ 39 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಬಿಡದಿ ತಾಲೂಕಿನಲ್ಲಿರುವ ಈಗಲ್ ಟನ್ ರೆಸಾರ್ಟ್ ಮೇಲೂ ಐಟಿ ದಾಳಿ ನಡೆಸಿದ್ದು. ಈ ದಾಳಿಯ ನಂತರ ಗುಜರಾತ್ ಕಾಂಗ್ರೆಸ್ ಶಾಸಕರು ಈ ಆರೋಪ ಮಾಡಿದ್ದಾರೆ.
ಗುಜರಾತ್ ಶಾಸಕ ಮತ್ತು ಎಐಸಿಸಿ ರಾಷ್ಟ್ರೀಯ ವಕ್ತಾರ ಶಕ್ತಿ ಸಿನ್ಹಾ ಗೊಯಿಲ್ ಅವರು ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ದಾಳಿ ನಡೆಸುವ ಮೂಲಕ ಬಿಜೆಪಿ ನಮ್ಮನ್ನು ಬೆದರಿಸುತ್ತಿದೆ. ಗುಜರಾತ್ ಕಾಂಗ್ರೆಸ್ ಶಾಸಕರಿಗೆ ವಸತಿ ಕಲ್ಪಿಸಿರುವ ಇಂತಹ ಸಮಯದಲ್ಲಿ ಡಿಕೆ ಶಿವಕುಮಾರ್ ಅವರ ಮೇಲೆ ಐಟಿ ದಾಳಿ ನಡೆಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಈ ಐಟಿ ದಾಳಿಯಿಂದ ನಮ್ಮ ನೈತಿಕತೆಯು ಪ್ರಬಲವಾಗಿದೆ. ಆಗಸ್ಟ್ 8ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಅಹಮ್ಮದ್ ಪಟೇಲ್ ಅವರಿಗೆ ನಾವು ಮತ ಚಲಾಯಿಸುವುದಾಗಿ ಶಕ್ತಿ ಸಿನ್ಹಾ ಗೊಯಿಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruDK ShivakumarGujaratಗುಜರಾತ್ಡಿಕೆ ಶಿವಕುಮಾರ್ಐಟಿ ದಾಳಿIT raidEagleton Resortಈಗಲ್ ಟನ್ ರೆಸಾರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


