ಅವಹೇಳನಕಾರಿ ಫೇಸ್ ಬುಕ್ ಪೋಸ್ಟ್: ಎಂಇಎಸ್ ಕಾರ್ಯಕರ್ತನ ವಿರುದ್ಧ ಕ್ರಮಕ್ಕೆ ಸಂಘಟನೆಗಳ ಒತ್ತಾಯ
ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತ ಸೂರಜ್ ಕನಬರ್ಕರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ...

Published On :
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಕಾರ್ಯಕರ್ತ ಸೂರಜ್ ಕನಬರ್ಕರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬರೆದಿದ್ದಕ್ಕೆ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕನ್ನಡ ಸಂಘಟನೆಗಳು ಒತ್ತಾಯಿಸಿವೆ. ಇಂತಹ ಬರಹಗಳು ಕನ್ನಡ ಮತ್ತು ಮರಾಠಿ ಭಾಷಿಕರ ನಡುವೆ ಸಾಮರಸ್ಯವನ್ನು ಹಾಳು ಮಾಡಿ ಕಾನೂನು, ಸುವ್ಯವಸ್ಥೆಗೆ ಭಂಗ ತರುತ್ತವೆ ಎಂದು ಕಾರ್ಯಕರ್ತರು ಹೇಳಿದ್ದಾರೆ.
ಈ ಬಗ್ಗೆ ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಪೊಲೀಸ್ ಆಯುಕ್ತ ಟಿ.ಜಿ.ಕೃಷ್ಣ ಭಟ್ ಗೆ ಮನವಿ ಸಲ್ಲಿಸಿದ್ದು, ಕನಬರ್ಕರ್ ಕನ್ನಡಿಗರು, ಕನ್ನಡ ಭಾಷೆ ಮತ್ತು ಕರ್ನಾಟಕದ ವಿರುದ್ಧ ಇಂತಹ ಅವಹೇಳನಕಾರಿ ಹೇಳಿಕೆಗಳನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡುತ್ತಿರುವುದು ಇದೇ ಮೊದಲ ಸಲವಲ್ಲ ಎಂದು ಹೇಳಿದರು.
ಇದಕ್ಕೆ ಮುನ್ನ ಈ ವಿಷಯವನ್ನು ಜಿಲ್ಲಾಡಳಿತ ಮತ್ತು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಅದು ಅವರಿಗೆ ಸಲುಗೆಗೆ ಕಾರಣವಾಗಿದೆ. ಕನಬರ್ಕರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಲಗೈಯಲ್ಲಿ ಕನ್ನಡ ಧ್ವಜವನ್ನು ಹಿಡಿದುಕೊಂಡು ಒಬ್ಬ ಮಹಿಳೆಯ ಹಿಂದೆ ಓಡುತ್ತಾ ಧ್ವಜದ ಕೆಳ ತುದಿಯಿಂದ ಮಹಿಳೆಗೆ ಹಿಂದಿನಿಂದ ಇರಿಯುವ ವ್ಯಂಗ್ಯಚಿತ್ರವನ್ನು ಪೋಸ್ಟ್ ಮಾಡಿದ್ದರು.
ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ದೀಪಕ್ ಗುಡಗನಟ್ಟಿ ಕನಬರ್ಕರ್ ವಿರುದ್ಧ ಮಾನಹಾನಿ ಕೇಸು ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಮಾನನಷ್ಟ ಮೊಕದ್ದಮೆkannada activistDefamation CaseMES Activistಎಂಇಎಸ್ ಕಾರ್ಯಕರ್ತಸೂರಜ್Kannada flagSuraj Kanabarkarಕನ್ನಡ ಕಾರ್ಯಕರ್ತರುಕನ್ನಡ ಧ್ವಜ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


