ಐಟಿ ದಾಳಿಯಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ...

Published On :
ನವದೆಹಲಿ: ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಸೇರಿದಂತೆ ಹಲವೆಡೆ ಐಟಿ ದಾಳಿ ನಡೆಸಿದೆ. ಇದರಿಂದ ದೇಶದ ಜನತೆಯನ್ನು ಮೋಸ ಮಾಡಲು ಸಾಧ್ಯವಿಲ್ಲ. ರಾಜ್ಯಸಭಾ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಅವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಜನರನ್ನು ಗುರಿಯಾಗಿಸಲು ಐಟಿ ಇಲಾಖೆ ಮತ್ತು ತನಿಖಾ ಏಜೆನ್ಸಿಗಳನ್ನು ಬಳಸುವುದು ಅಸಂವಿಧಾನಿಕ. ಇದರಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಖರ್ಗೆ ಹೇಳಿದ್ದಾರೆ.
ನಿನ್ನೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಗಳ ಮೇಲೆ ಏಕಕಾಲಕ್ಕೆ 39 ಕಡೆಗಳಲ್ಲಿ ದಾಳಿ ನಡೆಸಿತ್ತು. ಈ ವೇಳೆ 6 ಕೋಟಿ ನಗದು, ಸೇರಿದಂತೆ ಅಪಾರ ಕಡತಗಳನ್ನು ವಶಪಡಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್DK ShivakumarMallikarjun khargeDemocracyಪ್ರಜಾಪ್ರಭುತ್ವಮಲ್ಲಿಕಾರ್ಜುನ ಖರ್ಗೆಡಿಕೆ ಶಿವಕುಮಾರ್ಐಟಿ ದಾಳಿIT raid
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


