ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಮಂಡ್ಯ ರೈತರ ಪ್ರತಿಭಟನೆ
ಕೃಷಿ ಉದ್ದೇಶಕ್ಕಾಗಿ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಮಂಡ್ಯ ಸಾವಯವ ರೈತರ ವೇದಿಕೆ ಬುಧವಾರ ಪ್ರತಿಭಟನೆ ...

Published On :
ಮೈಸೂರು: ಕೃಷಿ ಉದ್ದೇಶಕ್ಕಾಗಿ ನಾಲೆಗಳಿಗೆ ನೀರು ಬಿಡುವಂತೆ ಒತ್ತಾಯಿಸಿ ಮಂಡ್ಯ ಸಾವಯವ ರೈತರ ವೇದಿಕೆ ಬುಧವಾರ ಪ್ರತಿಭಟನೆ ನಡೆಸಿತು.
ಮೈಸೂರು ಪ್ರದೇಶದಲ್ಲಿ ಸತತ ಮೂರನೇ ವರ್ಷವೂ ಬರ ಮುಂದುವರಿದಿದೆ, 200 ರೈತರು ಮಂಡ್ಯದಲ್ಲಿ ತಮ್ಮ ಜೀವ ಕಳೆದುಕೊಂಡಿದ್ದಾರೆ. ಹೀಗಿದ್ದರೂ ಸರ್ಕಾರ ಕಾಲುವೆಗಳಿಗೆ ನೀರುಬಿಡುತ್ತಿಲ್ಲ. ಮಳೆಯ ಕಣ್ಣ ಮುಚ್ಚಾಲೆಯಿಂದಾಗಿ ರೈತರು ಬಿತ್ತನೆ ಕಾರ್ಯ ಕೈಗೊಳ್ಳಬೇಕೋ ಬೇಡವೋ ಎಂದು ಚಿಂತೆಗೀಡಾಗಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ.
ಈ ಹಿಂದೆ ನಾಲೆಗಳಿಗೆ ನೀರು ಬಿಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ ರೈತರಿಗೆ ನೀರು ಕೊಡದ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ ಎಂದು ದೂರಿದ್ದಾರೆ.
ನಂಜನಗೂಡಿನ ಹುಲ್ಲಹಳ್ಳಿಯಲ್ಲೂ ರೈತರು ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ತಮಿಳುನಾಡಿಗೆ ನೀರು ಬಿಡುವುದನ್ನು ಮುಂದುವರಿಸಿದರೇ ಆಗಸ್ಟ್9 ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


