ಐಟಿ ದಾಳಿ: ಡಿಕೆ ಶಿವಕುಮಾರ್ ಬಿಪಿ ಸ್ವಲ್ಪ ಹೆಚ್ಚಾಗಿದೆ ಅಷ್ಟೇ- ಡಿಕೆ ಸುರೇಶ್
ಆದಾಯ ತೆರಿಗೆ ದಾಳಿಯಿಂದಾಗಿ ಕಳೆದ ಎರಡು ದಿನಗಳಿಂದ ಸರಿಯಾಗಿ ನಿದ್ರಿಸದ ಕಾರಣ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ರಕ್ತ ಒತ್ತಡ ಹೆಚ್ಚಾಗಿದೆ ಎಂದು...

Published On :
ಬೆಂಗಳೂರು: ಆದಾಯ ತೆರಿಗೆ ದಾಳಿಯಿಂದಾಗಿ ಕಳೆದ ಎರಡು ದಿನಗಳಿಂದ ಸರಿಯಾಗಿ ನಿದ್ರಿಸದ ಕಾರಣ ಇಂಧನ ಸಚಿವ ಡಿಕೆ ಶಿವಕುಮಾರ್ ಅವರಿಗೆ ರಕ್ತ ಒತ್ತಡ ಹೆಚ್ಚಾಗಿದೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಐಟಿ ದಾಳಿ ಹಿನ್ನೆಲೆ ಮನೆಯಿಂದ ಹೊರಗೆ ಬಾರದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಂಸದ ಡಿಕೆ ಸುರೇಶ್ ಅವರು ಬೆಳಗ್ಗೆ ತೆರಳಿದ್ದರು. ಈ ವೇಳೆ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಅಧಿಕಾರಿಗಳು ಅನುಮತಿ ನಿರಾಕರಿಸಿದ್ದರು. ನಂತರ ಡಿಕೆಶಿ ಅವರ ಆರೋಗ್ಯ ಕುರಿತು ಕಳವಳ ವ್ಯಕ್ತಪಡಿಸಿದ್ದರಿಂದ ಸುರೇಶ್ ಅಣ್ಣನನ್ನು ಭೇಟಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್ ಮಾಧ್ಯಮಗಳಲ್ಲಿ ಅಣ್ಣನ ಆರೋಗ್ಯ ಕುರಿತಂತೆ ವರದಿಗಳು ಪ್ರಕಟವಾಗಿದ್ದವು. ಇದರಿಂದ ನನಗೆ ಆಂತಕವಾಯಿತು. ಹೀಗಾಗಿ ಐಟಿ ಅಧಿಕಾರಿಗಳನ್ನು ಅಣ್ಣನನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದೆ. ಅಂತೆ 10 ನಿಮಿಷಗಳ ಕಾಲ ಮಾತನಾಡಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟರು ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಕಳೆದ ಎರಡು ದಿನಗಳಿಂದ ಸರಿಯಾಗಿ ನಿದ್ರೆ ಮಾಡದ ಕಾರಣ. ಡಿಕೆ ಶಿವಕುಮಾರ್ ಅವರಿಗೆ ಬಿಪಿ ಸ್ವಲ್ಪ ಜಾಸ್ತಿಯಾಗಿದೆ. ಹೀಗಾಗಿ ವಿಶ್ರಾಂತಿ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದೆ. ಅಂತೆ ಅಣ್ಣನಿಗೆ ಎರಡು ಗಂಟೆಗಳ ಕಾಲ ವಿಶ್ರಾಂತಿ ನೀಡಿ ನಂತರ ಅಧಿಕಾರಿಗಳು ಮಾಹಿತಿ ಪಡೆದುಕೊಂಡರು ಎಂದು ಸುರೇಶ್ ತಿಳಿಸಿದರು.
ಐಟಿ ಅಧಿಕಾರಿಗಳು ಬುಧವಾರ ಬೆಳಗ್ಗೆ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮತ್ತು ರೆಸಾರ್ಟ್ ಸೇರಿದಂತೆ 66 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಅಧಿಕಾರಿಗಳು 61 ಗಂಟೆಗಳಿಂದ ನಿರಂತರವಾಗಿ ಪರಿಶೋಧ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


