ಸಿದ್ದರಾಮಯ್ಯ, ಮೋದಿ ಸೇರಿ ಎಲ್ಲರಿಂದಲೂ ನನ್ನ ಮಗನ ವಿರುದ್ಧ ಪಿತೂರಿ: ಡಿಕೆಶಿ ತಾಯಿ ಆಕ್ರೋಶ
ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ನಡೆದ ಐಟಿ ದಾಳಿಯ ಬಗ್ಗೆ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದು ಪ್ರಧಾನಿ ನರೇಂದ್ರ ಮೋದಿ ನನ್ನ ಮಗನನ್ನ ಟಾರ್ಗೆಟ್ ಮಾಡಿದ್ದಾರೆ..

Published On :
ಬೆಂಗಳೂರು: ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ನಡೆದ ಐಟಿ ದಾಳಿಯ ಬಗ್ಗೆ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನನ್ನ ಮಗನನ್ನ ಟಾರ್ಗೆಟ್ ಮಾಡಿದ್ದಾರೆ.ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ನನ್ನ ಮಗನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇದು ದ್ವೇಷ ರಾಜಕಾರಣ, ನನ್ನ ಮಕ್ಕಳು ಜನಸೇವೆಯನ್ನು ಮಾಡುತ್ತಿದ್ದಾರೆ. ಅವರೂ ಯಾರಿಗೂ ಮೋಸ ಮಾಡಿಲ್ಲ. ನಮ್ಮ ಮನೆ ಮತ್ತು ಮಕ್ಕಳು ಮನೆ ಮೇಲೆ ದಾಳಿ ಮಾಡುವಂತಹದ್ದು ಏನೂ ಇರಲಿಲ್ಲ ಎಂದು ಹೇಳಿದ್ದಾರೆ
ನನ್ನ ಮಕ್ಕಳೂ ಎಂದೂ ತಪ್ಪು ಮಾಡಲ್ಲ, ಹಾಗಾಗಿ ನಾನು ಭಯಗೊಂಡಿಲ್ಲ ಎಂದು ಗೌರಮ್ಮ ಹೇಳಿದರು.
ಸಿಎಂ ಸಿದ್ದರಾಮಯ್ಯ ನನ್ನ ಮಗನಿಂದ ಮುಂದೆ ಬಂದಿದ್ದಾರೆ. ಸಿದ್ದರಾಮಯ್ಯ ನಂಬಿಸಿ ಕತ್ತು ಕುಯ್ಯುತ್ತಿದ್ದಾರೆ. ನನ್ನ ಮಕ್ಕಳನ್ನು ಕಂಡ್ರೆ ಅವರಿಗೆ ಆಗಿ ಬರೋದಿಲ್ಲ. ಅಕ್ಕಿ ಕೊಟ್ಟೆ, ಅದು ಕೊಟ್ಟೆ ಎಲ್ಲಾ ಕೊಟ್ರೂ ಅದೇನು ಅವರ ಮನೆಯಿಂದ ಕೊಟ್ಟಿಲ್ಲ. ರೈತರು ಬೆಳೆದಿದ್ದ ಅಕ್ಕಿಯನ್ನು ಕೊಟ್ಟಿದ್ದಾರೆ. ನನ್ನ ಮಕ್ಕಳ ಮನೆ ಮೇಲೆ ದಾಳಿ ನಡೆದರೂ ಸಿದ್ದರಾಮಯ್ಯ ಯಾಕೆ ಸುಮ್ಮನಿದ್ದಾರೆ? ಸಿದ್ದರಾಮಯ್ಯ ನನ್ನ ಮಕ್ಕಳ ಮೇಲೆ ಕತ್ತಿ ಮಸೆಯುತ್ತಿದ್ದಾರೆ. ಸಿದ್ದರಾಮಯ್ಯ ಸೇರಿ ಯಾರೋಬ್ಬರು ನನ್ನ ಮಗನ ಬೆಂಬಲಕ್ಕೆ ಬರಲಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಮನೆಗೆ ಬಂದ ಅಧಿಕಾರಿಗಳು ಏತಕ್ಕಾಗಿ ತಾವು ಬಂದಿದ್ದೇವೆ ಎಂದು ಹೇಳಲಿಲ್ಲ. ನನ್ನ ಕೈಯ್ಯಲ್ಲಿ ಸಹಿ ಪಡೆದುಕೊಂಡರು. ನಂತರ ಮನೆಯನ್ನು ಶೋಧ ಮಾಡಿದರು. ನನಗೆ ಮೊದಲು ಅವರು ಯಾರು ಎಂಬುದು ಗೊತ್ತಾಗಲಿಲ್ಲ. ನನ್ನ ಮಕ್ಕಳ ಬಗ್ಗೆ ಅವರು ಪ್ರಶ್ನಿಸಿದರು. ನಾನು ಉತ್ತರಿಸಿದೆ.
ಕಾಂಗ್ರೆಸ್ ಪಕ್ಷಕ್ಕಾಗಿ ನಿಯತ್ತಿನಿಂದ ನನ್ನ ಮಗ ಕೆಲಸ ಮಾಡುತ್ತಿದ್ದಾನೆ. ಇದಕ್ಕಾಗಿ ಬಿಜೆಪಿ ಅವನನ್ನು ಗುರಿಯಾಗಿಸಿಕೊಂಡಿದೆ. ನನ್ನ ಮಗ ಕಷ್ಟ ಪಟ್ಟು ಹಣ, ಹೆಸರು, ಗೌರವ ಸಂಪಾದಿಸಿದ್ದಾನೆ. ಯಾವುದೇ ಶಕ್ತಿಗಳು ಆತನನ್ನು ತುಳಿಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


