ಎಸ್ಸಿ, ಎಸ್ಟಿ ನೌಕರರಿಗೆ ಬಡ್ತಿ ಮೀಸಲಾತಿ ಮುಂದುವರೆಸಲು ರಾಜ್ಯ ಸರ್ಕಾರದಿಂದ ಸುಗ್ರೀವಾಜ್ಞೆ
ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರಿಗೆ ನೀಡಲಾಗುತ್ತಿರುವ ಬಡ್ತಿ ಮೀಸಲಾತಿಯನ್ನು ಮುಂದುವರೆಸುವುದಕ್ಕಾಗಿ...

Published On :
ಬೆಂಗಳೂರು: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರಿಗೆ ನೀಡಲಾಗುತ್ತಿರುವ ಬಡ್ತಿ ಮೀಸಲಾತಿಯನ್ನು ಮುಂದುವರೆಸುವುದಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಲು ಸೋಮವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಎಸ್ಸಿ, ಎಸ್ಟಿ ನೌಕರರಿಗೆ ಬಡ್ತಿ ಮೀಸಲಾತಿ ಮುಂದುವರೆಸಲು ಕಾನೂನಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಈಗಾಗಲೇ ಬಡ್ತಿ ನೀಡಿರುವವರಿಗೆ ಹಿಂಬಡ್ತಿ ನೀಡದೆ, ಮುಂದೆ ಬಡ್ತಿಯಲ್ಲಿ ಅನ್ಯಾಯವೂ ಆಗದಂತೆ ನೋಡಿಕೊಳ್ಳಲು ಕಾನೂನಿಗೆ ತಿದ್ದುಪಡಿ ತರಲಾಗಿದ್ದು, ಈ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಾಳೆ ರಾಜ್ಯಪಾಲರ ಸಹಿಗಾಗಿ ಕಳುಹಿಸಲಾಗುವುದು ಎಂದರು.
ಈಗ ಕೊಟ್ಟಿರುವ ಬಡ್ತಿ ವಾಪಸ್ ಪಡೆಯಲು ಕಷ್ಟ. ನೇಮಕ ಹಾಗೂ ಬಡ್ತಿ ವಿಚಾರದಲ್ಲಿ ಇನ್ನು ಮುಂದೆ ಅನ್ಯಾಯ ಆಗದಂತೆ ನೋಡಿಕೊಳ್ಳಬೇಕಿದೆ. ಸುಪ್ರೀಂ ಕೋರ್ಟ್ ಆದೇಶದಿಂದಾಗಿ ನೂರಾರು ನೌಕರರಿಗೆ ಅನ್ಯಾಯವಾಗಿದೆ ಎಂದರು.
ಕಳೆದ ಫೆಬ್ರವರಿ 9ರಂದು ಸುಪ್ರೀಂ ಕೋರ್ಟ್, ಬಡ್ತಿ ಮೀಸಲಾತಿಯಿಂದಾಗಿ ಇತರೆ ವರ್ಗದರಿಗೆ ಅನ್ಯಾಯ ಆಗಿದ್ದು, ಅನ್ಯಾಯ ಸರಿಪಡಿಸಿ ಎಂದು ತೀರ್ಪು ನೀಡಿತ್ತು. ಹಿಂದುಳಿದಿರುವಿಕೆ ಮಾನದಂಡ ಹಾಗೂ ಕಾರ್ಯದಕ್ಷತೆ ಮೇಲಿನ ಪರಿಣಾಮದ ಕುರಿತು ಮಾಹಿತಿ ನೀಡದ ರಾಜ್ಯ ಸರ್ಕಾರದ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿತ್ತು. ಪರಿಷ್ಕೃತ ಸೇವಾ ಜೇಷ್ಠತೆ ಪಟ್ಟಿ ಸಿದ್ಧಪಡಿಸಿ ನಂತರದ ಮೂರು ತಿಂಗಳಲ್ಲಿ ಬಡ್ತಿಯಲ್ಲಿ ಆಗಿರುವ ಅನ್ಯಾಯ ಸರಿಪಡಿಸಿ ಎಂದು ಗಡುವು ನೀಡಿತ್ತು. ಬಡ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 9 ರೊಳಗೆ ತೀರ್ಪು ಪಾಲನೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿತ್ತು. ಇದರ ನಡುವೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಸಿದೆ. ಆ ಅರ್ಜಿ ವಿಚಾರಣೆಗೆ ಬಂದಿಲ್ಲ. ಹೀಗಾಗಿ, ಗಡುವಿನ ಒಳಗೆ ವಿಚಾರ ಇತ್ಯರ್ಥಕ್ಕೆ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಸುಗ್ರೀವಾಜ್ಞೆordinanceSCಎಸ್ಸಿST employees promotion reservationಎಸ್ಟಿ ನೌಕರರ ಬಡ್ತಿ ಮೀಸಲಾತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


