ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಕ್ಕಳ ದಿನಾಚರಣೆ ಪ್ರಯುಕ್ತ 6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ...

Published On :
ಬೆಂಗಳೂರು: ಮಕ್ಕಳ ದಿನಾಚರಣೆ ಪ್ರಯುಕ್ತ 6ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಬೇರೆಯವರ ಜೀವವನ್ನು ಕಾಪಾಡಲು ವಿಶೇಷ ಧೈರ್ಯ ತೋರಿಸಿದ ಮತ್ತು ಸಂದರ್ಭಕ್ಕೆ ತಕ್ಕಂತೆ ಯೋಚಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಲಾಗುವುದು. ಕಳೆದ ವರ್ಷ ಆಗಸ್ಟ್ ನಿಂದ ಈ ವರ್ಷ ಜುಲೈಯವರೆಗೆ ನಡೆದ ಘಟನೆಯಾಗಿರಬೇಕು. 1999 ಆಗಸ್ಟ್ 1ರ ನಂತರ ಜನಿಸಿದವರು ಇದಕ್ಕೆ ಅರ್ಜಿ ಹಾಕಬಹುದು. 10,000 ರೂಪಾಯಿ ನಗದು ಬಹುಮಾನವಿರುತ್ತದೆ. ಅರ್ಜಿಗೆ ಆಯಾ ಜಿಲ್ಲೆಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಿಗುತ್ತದೆ. ತುಂಬಿದ ಅರ್ಜಿಗಳನ್ನು ಈ ತಿಂಗಳ 31ರೊಳಗೆ ಸಲ್ಲಿಸಬೇಕು. ಕನ್ನಡ ಭಾಷೆಯಲ್ಲಿಯೇ ಅರ್ಜಿಗಳನ್ನು ಭರ್ತಿ ಮಾಡಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Childrenಮಕ್ಕಳುಶೌರ್ಯ ಪ್ರಶಸ್ತಿWomen and Child Developmentಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆBravery award
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


