ರಾಜ್ಯ

ಮಂಗಳೂರು ಕೋಮುಗಲಭೆ ಹಿನ್ನೆಲೆ: ಐಪಿ ಎಸ್ ಅಧಿಕಾರಿಗಳ ವರ್ಗಾವಣೆ

ಪಶ್ಚಿಮ ವಲಯ ಐಜಿಪಿಯಾಗಿದ್ದ ಪಿ.ಹರಿಶೇಖರನ್‌ ಅವರನ್ನು ಬೆಂಗಳೂರಿನ ಕೇಂದ್ರ ಸ್ಥಾನದ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ....

ಮಂಗಳೂರು ಕೋಮುಗಲಭೆ ಹಿನ್ನೆಲೆ: ಐಪಿ ಎಸ್ ಅಧಿಕಾರಿಗಳ ವರ್ಗಾವಣೆ
ಹೇಮಂತ್ ನಿಂಬಾಳ್ಕರ್ ಮತ್ತು ಪಿ. ಹರಿಶೇಖರನ್
Published On :
ಬೆಂಗಳೂರು: ಪಶ್ಚಿಮ ವಲಯ ಐಜಿಪಿಯಾಗಿದ್ದ ಪಿ.ಹರಿಶೇಖರನ್‌ ಅವರನ್ನು ಬೆಂಗಳೂರಿನ ಕೇಂದ್ರ ಸ್ಥಾನದ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಮಂಗಳೂರಿನ ದಕ್ಷಿಣ ಕನ್ನಡದಲ್ಲಿ ನಡೆದ ಆರ್ ಎಸ್ ಎಲ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಸೋಮವಾರ ಪಿ. ಹರಿಶೇಖರ್ ಅವರ ಬದಲಿಗೆ ಹೇಮಂತ್ ನಿಂಬಾಳ್ಕರ್ ಅವರನ್ನು ಪಶ್ಚಿಮ ವಲಯ ಐಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಶರತ್ ಮಡಿವಾಳ ಕೊಲೆ ಪ್ರಕರಣ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ನಡೆದ ಹಲವು ಅಹಿತಕರ ಘಟನೆಗಳಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತ ಪಡಿಸಿದ್ದರು.
ಸುನೀಲ್ ಕುಮಾರ್ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮೇಲೆ ಹೇಮಂತ್ ನಿಂಬಾಳ್ಕರ್ ಬೆಂಗಳೂರಿನಿಂದ ರಿಲಿವ್ ಆಗಲಿದ್ದಾರೆ. 
ಬಿಜಯ್ ಕುಮಾರ್ ಸಿಂಗ್ ಅವರನ್ನು ಗುಪ್ತಚರ ಇಲಾಖೆ ಐಜಿಯಾಗಿ ನೇಮಕ ಮಾಡಲಾಗಿದೆ. ಅಪರಾದ ವಿಭಾಗದ ಹೆಚ್ಚುವರಿ ಆಯುಕ್ತ ಎಸ್. ರವಿ ಅವರನ್ನು ಭದ್ರತೆ ಮತ್ತು ವಿಚಕ್ಷಣಾ ದಳದ ನಿರ್ದೇಶಕರನ್ನಾಗಿ, ಎನ್ ಸತೀಶ್ ಕುಮಾರ್ ಅವರನ್ನು ಅಪರಾಧ ವಿಭಾಗದ  ಜಂಟಿ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.