ವಾರ್ಡ್ ಕಚೇರಿಯಲ್ಲಿ ಗುತ್ತಿಗೆದಾರರು, ಕೆಲಸಗಾರರ ಮಾಹಿತಿ ನೀಡಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ತ್ಯಾಜ್ಯ ಸಮಸ್ಯೆ ಸೇರಿದಂತೆ ಹಲವು ರೀತಿಯ ನಾಗರಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಹೈಕೋರ್ಟ್ ಸಲಹೆ ನೀಡಿದ್ದು, ವಾರ್ಡ್ ಗಳಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು

Published On :
ಬೆಂಗಳೂರು: ತ್ಯಾಜ್ಯ ಸಮಸ್ಯೆ ಸೇರಿದಂತೆ ಹಲವು ರೀತಿಯ ನಾಗರಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಣೆ ಮಾಡುವುದಕ್ಕೆ ಹೈಕೋರ್ಟ್ ಸಲಹೆ ನೀಡಿದ್ದು, ವಾರ್ಡ್ ಗಳಲ್ಲಿ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಪ್ರದರ್ಶಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ.
ಪ್ರತಿ ವಾರ್ಡ್ ನ ಕಚೇರಿಯಲ್ಲೂ ಸಹ ಗುತ್ತಿಗೆದಾರರು ಹಾಗೂ ಕಾರ್ಮಿಕರ ಹೆಸರನ್ನು ಸಾರ್ವಜನಿಕವಾಗಿ ಪ್ರದರ್ಶಿಸಬೇಕು ಹೆಸರಿನೊಂದಿಗೆ ಗುತ್ತಿಗೆದಾರರ ವಿಳಾಸ, ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ.
ಹಲವು ನಾಗರಿಕ ಸಂಘಟನೆಗಳು ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಅರ್ಜಿ ವಿಚಾರಣೆ ನಡೆಸಿರುವ ನ್ಯಾ.ಜಯಂತ್ ಪಟೇಲ್ ಹಾಗೂ ನ್ಯಾ.ಎಸ್ ಸುಜಾತ ಅವರಿದ್ದ ವಿಭಾಗೀಯ ಪೀಠ ಬಿಬಿಎಂಪಿಗೆ 2 ವಾರಗಳ ಗಡುವು ನೀಡಿದ್ದು ಮುಂದಿನ ವಿಚಾರಣೆಯಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


