ರಾಜ್ಯ

ಕನ್ನಡದಲ್ಲಿ ನಾಮಫಲಕ ಹಾಕಿ, ಇಲ್ಲದಿದ್ದರೆ ದಂಡ: ಕೆಡಿಎ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಎಚ್ಚರಿಕೆ

ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯವಾಗಿ ಇರುವಂತೆ...

ಕನ್ನಡದಲ್ಲಿ ನಾಮಫಲಕ ಹಾಕಿ, ಇಲ್ಲದಿದ್ದರೆ ದಂಡ: ಕೆಡಿಎ ಅಧ್ಯಕ್ಷ ಎಸ್.ಜಿ. ಸಿದ್ದರಾಮಯ್ಯ ಎಚ್ಚರಿಕೆ
ಕೆಡಿಎ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ
Published On :
ಬೆಂಗಳೂರು: ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಕಡ್ಡಾಯವಾಗಿ ಇರುವಂತೆ ನೋಡಿಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.
ಈ ನಿಯಮವನ್ನು ಜಾರಿಗೆ ತರಲು 20 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು ಪಾಲಿಸಲು ವಿಫಲವಾದಲ್ಲಿ ದಂಡ ವಿಧಿಸಲಾಗುವುದು ಎಂದು ನಗರ ಜಿಲ್ಲಾಧಿಕಾರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಹೇಳಿದ್ದಾರೆ. ಬಿಬಿಎಂಪಿ ವ್ಯಾಪ್ತಿಗೆ ಬರುವ ಎಲ್ಲಾ ಅಂಗಡಿಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮಫಲಕಗಳನ್ನು ಹಾಕಿಸಲು ಒಂದು ತಿಂಗಳ ಕಾಲಾವಕಾಶವನ್ನು ಪಾಲಿಕೆ ಅಧಿಕಾರಿಗಳಿಗೆ ನೀಡಲಾಗಿದೆ. ಕನ್ನಡದಲ್ಲಿ ನಾಮಫಲಕ ಹಾಕದಿರುವ ಅಂಗಡಿಗಳ  ಅನುಮತಿಯನ್ನು ರದ್ದು ಮಾಡುವ ಅವಕಾಶ ಬಿಬಿಎಂಪಿಗೆ ಇದೆ ಎಂದು ಅವರು ಹೇಳಿದರು.
ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ದೊರಕುತ್ತದೆಯೇ ಎಂದು ಪರೀಕ್ಷೆ ಮಾಡಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕೂಡ ಅಧ್ಯಕ್ಷರು ತಿಳಿಸಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರಣಿ ತಪಾಸಣೆ ನಡೆಸುವ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ನಗರ ಜಿಲ್ಲಾಧಿಕಾರಿಗಳ ಕಚೇರಿಯ ವೆಬ್ ಸೈಟ್ ನಲ್ಲಿ ಕನ್ನಡ ಭಾಷೆಯ ಅವತರಣಿಕೆಯಿಲ್ಲ. ಈ ಬಗ್ಗೆ ಪ್ರಾಧಿಕಾರ, ಕನ್ನಡ ಭಾಷೆಯನ್ನು ಪ್ರಾಥಮಿಕವಾಗಿ ಮತ್ತು ಇಂಗ್ಲಿಷ್ ನ್ನು ಆಯ್ಕೆಯ ಭಾಷೆಯ ಅವತರಣಿಕೆಯಾಗಿ ನೀಡಬೇಕೆಂದು ಹೇಳಿದೆ ಕೂಡ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.