ಜಂತಕಲ್ ಮೈನಿಂಗ್ ಕೇಸ್: ಎಚ್ ಡಿ ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು
ಜಂತಕಲ್ ಮೈನಿಂಗ್ ಕಂಪನಿಗೆ ಪರ್ಮಿಟ್ ನೀಡಿದ ಪ್ರಕರಣ ಸಂಬಂಧ ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ...

Published On :
ಬೆಂಗಳೂರು: ಜಂತಕಲ್ ಮೈನಿಂಗ್ ಕಂಪನಿಗೆ ಪರ್ಮಿಟ್ ನೀಡಿದ ಪ್ರಕರಣ ಸಂಬಂಧ ಮಾಜಿ ಸಿಎಂ ಎಚ್. ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.
ಸಾಕ್ಷ್ಯಾಧಾರಗಳನ್ನು ನಾಶಪಡಿಸದಂತೆ ಸೂಚಿಸಿರುವ ಕೋರ್ಟ್ 15 ದಿನಗಳಿಗೊಮ್ಮೆ ಎಸ್ಐಟಿ ಮುಂದೆ ಹಾಜರಾಗಬೇಕೆಂದು ಸೂಚಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ, 5 ಲಕ್ಷ ರು ಬಾಂಡ್ ಶ್ಯೂರಿಟಿ ನೀಡುವಂತೆ ತಿಳಿಸಿದೆ.
ಕುಮಾರಸ್ವಾಮಿ ಸಿಎಂ ಆಗಿದ್ದ ಸಂದರ್ಭದಲ್ಲಿ ಜಂತಕಲ್ ಕಂಪೆನಿಗೆ ಮೈನಿಂಗ್‍ಗೆ ಅವಕಾಶ ನೀಡಿದ್ದರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ಸಂಬಂಧ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೆಳಹಂತದ ನ್ಯಾಯಾಲಯದ ವಜಾಗೊಳಿಸಿತ್ತು. ಇದನ್ನು ಆಕ್ಷೇಪಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಇವರ ಮನವಿ ಮಾನ್ಯ ಮಾಡಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
High Courtಹೈಕೋರ್ಟ್ಎಚ್.ಡಿ ಕುಮಾರಸ್ವಾಮಿಜಾಮೀನುbailH.D.KumaraswamyJanthakal Mining caseಜಂತಕಲ್ ಮೈನಿಂಗ್ ಕೇಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


