ಬೆಂಗಳೂರು: ಬಿಬಿಎಂಪಿಗೆ ಸೇರಿದ ಪಾರ್ಕ್‌ನಲ್ಲಿ ಕಬ್ಬಿಣದ ರಾಡ್ ತಗುಲಿ ಬಾಲಕಿ ಸಾವು
ಬೆಂಗಳೂರಿನ ಮಹದೇವಪುರ ಸಮೀಪದ ಎಂವಿಜೆ ಲೇಔಟ್ ಉದ್ಯಾನದಲ್ಲಿ ಉಯ್ಯಾಲೆಗಾಗಿ ಅಳವಡಿಸಿದ್ದ ಕಬ್ಬಿಣದ ರಾಡ್ ಬಿದ್ದು ಆಟವಾಡುತ್ತಿದ್ದ 13 ವರ್ಷದ ಬಾಲಕಿ...

Published On :
ಬೆಂಗಳೂರು: ಬೆಂಗಳೂರಿನ ಮಹದೇವಪುರ ಸಮೀಪದ ಎಂವಿಜೆ ಲೇಔಟ್ ಉದ್ಯಾನದಲ್ಲಿ ಉಯ್ಯಾಲೆಗಾಗಿ ಅಳವಡಿಸಿದ್ದ ಕಬ್ಬಿಣದ ರಾಡ್ ಬಿದ್ದು ಆಟವಾಡುತ್ತಿದ್ದ 13 ವರ್ಷದ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ.
ಮಹದೇವಪುರ ನಿವಾಸಿ ಸುಬ್ರಮಣಿ ಹಾಗೂ ವಿಜಯಾ ದಂಪತಿಯ ಪುತ್ರಿ 13 ವರ್ಷದ ಪ್ರಿಯಾ ಮೃತ ದುರ್ದೈವಿ. ಸ್ನೇಹಿತೆಯರೊಂದಿಗೆ ಪಾರ್ಕ್ ನಲ್ಲಿದ್ದ ಕಬ್ಬಣಿದ ಆಟಿಕೆಗಳೊಂದಿಗೆ ಆಟವಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕಬ್ಬಿಣದ ರಾಡ್ ತಗುಲಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಪ್ರಿಯಾಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


