ರಾಜ್ಯ

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯರಿಂದ ಪೊಲಿಟಿಕಲ್ ಗೇಮ್: ಅಮಿತ್ ಶಾ

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಮತ್ತಷ್ಟು ಗಂಭೀರವಾಗಿ ನಡೆಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ...

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಿದ್ದರಾಮಯ್ಯರಿಂದ ಪೊಲಿಟಿಕಲ್ ಗೇಮ್: ಅಮಿತ್ ಶಾ
ಸಿದ್ದರಾಮಯ್ಯ
Published On :
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ನಡೆಸುತ್ತಿರುವ ಹೋರಾಟವನ್ನು ಮತ್ತಷ್ಟು ಗಂಭೀರವಾಗಿ ನಡೆಸುವಂತೆ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ಮುಖಂಡರಿಗೆ ಕರೆ ನೀಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸಿಎಂ ಸಿದ್ದರಾಮಯ್ಯ ಸರ್ಕಾರ ಪ್ರತ್ಯೇಕ ನಾಡ ಧ್ವಜ ಮತ್ತು ವೀರಶೈವ-ಲಿಂಗಾಯತ ಧರ್ಮದ ಬೇಡಿಕೆ ಪ್ರಕರಣಗಳನ್ನು ಮುಂದಿಟ್ಟುಕೊಟ್ಟಿದೆ ಎಂದು  ಶಾ ಆರೋಪಿಸಿದ್ದಾರೆ. 
ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಕಾಂಗ್ರೆಸ್ ನ ರಾಜಕೀಯ ಆಟ, ಮುಂದಿನ ವಿಧಾನಸಭೆ ಚುನಾವಣೆಗಾಗಿ ಇದೆಲ್ಲಾ ನಡೆಯುತ್ತಿದೆ. ನಿಜವಾಗಿಯೂ ಸಿಎಂ ಗೆ ಈ ಬಗ್ಗೆ ಆಸಕ್ತಿ ಇದ್ದಿದ್ದರೇ ಕೂಡಲೇ ವಿಷಯಗಳನ್ನು ಬಗೆಹರಿಸಬಹುದಿತ್ತು ಎಂದು ಎಂದು ಅಮಿತ್ ಶಾ ಹೇಳಿದ್ದಾರೆ.
ಕಳಸಾ ಬಂಡೂರಿ ವಿಷಯದಲ್ಲಿ ಕೇಂದ್ರ ಮಧ್ಯಸ್ಥಿಕೆ ವಹಿಸಬೇಕೆಂದು ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ, ಆದರೆ ಗೋವಾ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗಲೇ ಈ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳಬಹುದಿತ್ತು ಎಂದು, ಆದರೆ ಹಾಗೆ ಮಾಡದ ಕಾಂಗ್ರೆಸ್ ಈಗ ಕೇಂದ್ರ ಸರ್ಕಾರವನ್ನು ದೂರುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.