ಶರತ್ ಮಡಿವಾಳ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ
ಬಿ.ಸಿ.ರೋಡ್‌ನಲ್ಲಿ ನಡೆದ ಆರ್‌ಎಸ್‌ಎಸ್ ಕಾಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ..

Published On :
ಮಂಗಳೂರು: ಇತ್ತೀಚೆಗೆ ಬಿ.ಸಿ.ರೋಡ್‌ನಲ್ಲಿ ನಡೆದ ಆರ್‌ಎಸ್‌ಎಸ್ ಕಾಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಲಂದರ್ ಶಫಿ, ನಾಸೀರ್ ಮತ್ತು ರಿಯಾಜ್ ಎನ್ನುವ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಬಂಧಿತರು ಬಂಟ್ವಾಳ ಮತ್ತು ಬೆಳ್ತಂಗಡಿ ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.
ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


