ಇಂದಿರಾ ಕನಸು ಇಲ್ಲಿ ನನಸು, ಹೆಮ್ಮೆ ಮತ್ತು ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ: ರಾಹುಲ್ ಗಾಂಧಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕನಸು ಕರ್ನಾಟಕದಲ್ಲಿ ನನಸಾಗುತ್ತಿದೆ, ಬಹಳ ಹೆಮ್ಮೆಯಿಂದ ಹಾಗೂ ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕನಸು ಕರ್ನಾಟಕದಲ್ಲಿ ನನಸಾಗುತ್ತಿದೆ, ಬಹಳ ಹೆಮ್ಮೆಯಿಂದ ಹಾಗೂ ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದರು.
ಬೆಂಗಳೂರಿನ ಜಯನಗರದದ ಕನಕನಪಾಳ್ಯದಲ್ಲಿ ನಿರ್ಮಾಣ ಮಾಡಲಾಗಿರುವ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟಿಸಿದ ಬಳಿಕ ಕಾಂಗ್ರೆಸ್ ಕಾರ್ಯಕರ್ತರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಮೊದಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ತಂಡವನ್ನು ಅಭಿನಂಧಿಸುತ್ತೇನೆ. ಇಂದಿರಾ ಗಾಂಧಿ ಅವರ ಕನಸು ಇಲ್ಲಿ ನನಸಾಗುತ್ತಿದೆ. ಇಂದಿರಾ ಗಾಂಧಿ ಅವರು ಕೂಡ ರೋಟಿ ಮಕಾನ್ ಕಪಡಾ ಬಗ್ಗೆ ಮಾತನಾಡುತ್ತಿದ್ದರು. ಇದೀಗ ಅ ಕನಸು ಇಲ್ಲಿ ನನಸಾಗುತ್ತಿದೆ. ರಾಜ್ಯದ ಯಾವುದೇ ವ್ಯಕ್ತಿಯೂ ಹಸಿವಿನಿಂದ ಮಲಗಬಾರದು ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ.
ಇಲ್ಲಿ ಕಡಿಮೆ ಹಣಕ್ಕೆ ಗುಣಮಟ್ಟದ ಆಹಾರವನ್ನು ಜನತೆಗೆ ನೀಡಲಾಗುತ್ತಿದೆ. ಬೆಂಗಳೂರಿನ ಯಾವ ವ್ಯಕ್ತಿಯೂ ಹಸಿವಿನಿಂದ ಇರಬಾರದು ಎಂಬ ಮಹತ್ವಾಕಾಂಕ್ಷೆಯೊಂದಿಗೆ ಸಿಎಂ ಸಿದ್ದರಾಮಯ್ಯ ಈ ಯೋಜನೆ ರೂಪಿಸಿದ್ದಾರೆ. ತುಂಬಾ ಹೆಮ್ಮೆಯಿಂದ ಮತ್ತು ಸಂತೋಷದಿಂದ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ರಾಹುಲ್ ಗಾಗಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ
ಇನ್ನು ಇಂದಿರಾ ಕ್ಯಾಂಟೀನ್ ಉದ್ಘಾಟನೆಗಾಗಿ ರಾಹುಲ್ ಗಾಂಧಿ ಅವರು ಜಯನಗರಕ್ಕೆ ಆಗಮಿಸಿದ್ದರಿಂದ ಇಲ್ಲಿ ಒಂದು ರಸ್ತೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆರ್ ವಿ ರಸ್ತೆಯಿಂದ ಅಶೋಕ ಪಿಲ್ಲರ್ ವರೆಗಿನ ರಸ್ತೆಯನ್ನು ಬ್ಯಾರಿಕೇಡ್ ಗಳಿಂದ ಮುಚ್ಚಲಾಗಿತ್ತು. ಹೀಗಾಗಿ ಸ್ಥಳದಲ್ಲಿ ಕೊಂಚ ಟ್ರಾಫಿಕ್ ಜಾಮ್ ಉಂಟಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


