ನಿರುದ್ಯೋಗ, ಡೋಕ್ಲಾಮ್, ಗೋರಖ್ ಪುರ ವಿಷಯಗಳಲ್ಲಿ ಪ್ರಧಾನಿ ಮೌನಕ್ಕೆ ರಾಹುಲ್ ಟೀಕೆ
ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದು...

Published On :
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದು, ಪ್ರಧಾನಿ ಕಳೆದ ವರ್ಷಕ್ಕಿಂತ ಈ ಬಾರಿ ಕಡಿಮೆ ಅವಧಿಯ ಭಾಷಣ ಮಾಡಿದ್ದು ಅವರ ಬಳಿ ಮಾತನಾಡಲು ವಿಷಯಗಳು ಇಲ್ಲದಂತಾಗಿವೆ ಎಂದು ಲೇವಡಿ ಮಾಡಿದ್ದಾರೆ.
ಆ.16 ರಂದು ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿ ಮಾತನಾಡಿರುವ ರಾಹುಲ್ ಗಾಂಧಿ, ನಾಲ್ಕು ವರ್ಷಗಳಲ್ಲಿಯೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಅವಧಿಯ ಭಾಷಣ ಮಾಡಿದ್ದಾರೆ. ಅವರ ಬಳಿ ಮಾತನಾಡಲು ವಿಷಯಗಳು ಇಲ್ಲದಂತಾಗಿವೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುವ ಮುನ್ನ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ
ನಿರುದ್ಯೋಗ, ಡೋಕ್ಲಾಮ್, ಗೋರಖ್ ಪುರ ವಿಷಯಗಳ ಬಗ್ಗೆ ಪ್ರಧಾನಿ ಮೌನ ವಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ನಿರಿದ್ಯೋಗ ಸಮಸ್ಯೆ 8 ವರ್ಷಗಳಲ್ಲೇ ಹೆಚ್ಚಿದೆ ಎಂದು ಸ್ವಾತಂತ್ರ್ಯದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿಲ್ಲ. ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಗೆ ನಮ್ಮ ಸರ್ಕಾರದ 10 ವರ್ಷಗಳ ಶ್ರಮವನ್ನು ಮೋದಿ ಸರ್ಕಾರ ಕೇವಲ ಒಂದು ತಿಂಗಳಲ್ಲಿ ನಿರ್ನಾಮ ಮಾಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


