ರಾಜ್ಯ

ಚಿತ್ರದುರ್ಗ ಬಳಿ ಭೀಕರ ಅಪಘಾತ : ಸ್ಥಳದಲ್ಲೇ 4 ಮಂದಿ ದುರ್ಮರಣ

ಆಟೋ ರಿಕ್ಷಾ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತ ಪಟ್ಟಿರುವ ಧಾರುಣ ಘಟನೆ ಚಿತ್ರದುರ್ಗದ ...

ಚಿತ್ರದುರ್ಗ ಬಳಿ ಭೀಕರ ಅಪಘಾತ : ಸ್ಥಳದಲ್ಲೇ 4 ಮಂದಿ ದುರ್ಮರಣ
ಸಾಂದರ್ಭಿಕ ಚಿತ್ರ
Published On :
ಚಿತ್ರದುರ್ಗ: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತ ಪಟ್ಟಿರುವ ಧಾರುಣ ಘಟನೆ ಚಿತ್ರದುರ್ಗದ ಹರ್ತಿಕೋಟೆ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬೀದರ್- ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ150ಎ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯ ಮುತ್ತುರಾಜ್(22), ಶರಣ್ ರಾಜ್(22), ಮದಕರಿಪುರದ ಚಿದಾನಂದ್(20) ಹಾಗೂ ಕೆ.ಎನ್ ಕೋಟೆಯ ಮನು(20) ಮೃತ ದುರ್ದೈವಿಗಳು. ದಿನಗೂಲಿ ಕೆಲಸಕ್ಕಾಗಿ ಇವರೆಲ್ಲಾ ಆಟೋದಲ್ಲಿ ತೆರಳುತ್ತಿದ್ದರು.
ಲಾರಿ ಚಾಲಕನ ಅಜಾಗರೂಕ ಚಾಲನೆ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತ ನಡೆದ ವೇಳೆ ಲಾರಿ ಹಿರಿಯೂರು ಕಡೆಗೆ ತೆರಳುತ್ತಿತ್ತು.
ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್ ಪಿ ಜೋಶಿ, ಶ್ರೀನಾಥ್ ಮಹಾದೇವ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಯಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.