ರಾಜ್ಯ

ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಂದ ಈ ಬಾರಿ ದಸರಾ ಉದ್ಘಾಟನೆ

ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ...

ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಂದ ಈ ಬಾರಿ ದಸರಾ ಉದ್ಘಾಟನೆ
ಕೆಎಸ್ ನಿಸಾರ್ ಅಹ್ಮದ್
Published On :
ಮೈಸೂರು: ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಲಿದ್ದಾರೆ. 
ಹಿರಿಯ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಸಾರ್ ಜತೆ ಮಾತುಕತೆ ನಡೆಸಿರುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ.
ನಿಸಾರ್ ಅಹಮದ್  ಅವರಿಗೆ  ಒಂದು ವಾರದಲ್ಲಿ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ನಿಸಾರ್ ಅಹ್ಮದ್,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಕೂಡ ವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.