ರಾಜ್ಯ

ಜಮ್ಮು- ಕಾಶ್ಮೀರದಲ್ಲಿ ನಾವು 10 ವರ್ಷಗಳಲ್ಲಿ ಸ್ಥಾಪಿಸಿದ್ದ ಶಾಂತಿ, ಮೋದಿಯಿಂದ ನಾಶ: ರಾಹುಲ್

ಕಾಶ್ಮೀರದಲ್ಲಿ ಕಳೆದ 10 ವರ್ಷಗಳಲ್ಲಿ ಸ್ಥಾಪಿಸಿದ್ದ ಶಾಂತಿಯನ್ನು ಮೋದಿ ಕೇವಲ 1 ತಿಂಗಳಲ್ಲಿ ನಾಶ ಮಾಡಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ..

ಜಮ್ಮು- ಕಾಶ್ಮೀರದಲ್ಲಿ ನಾವು 10 ವರ್ಷಗಳಲ್ಲಿ ಸ್ಥಾಪಿಸಿದ್ದ ಶಾಂತಿ, ಮೋದಿಯಿಂದ ನಾಶ: ರಾಹುಲ್
ಇಂದಿರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ
Published On :
ಬೆಂಗಳೂರು: ಕಾಶ್ಮೀರದಲ್ಲಿ ಕಳೆದ 10 ವರ್ಷಗಳಲ್ಲಿ ಸ್ಥಾಪಿಸಿದ್ದ ಶಾಂತಿಯನ್ನು ಮೋದಿ ಕೇವಲ 1 ತಿಂಗಳಲ್ಲಿ ನಾಶ ಮಾಡಿದ್ದಾರೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು,  ಜಮ್ಮು ಕಾಶ್ಮೀರದಲ್ಲಿ ಮೋದಿ ಸರ್ಕಾರ ದ್ವೇಷ ಮತ್ತು ಶತೃತ್ವವನ್ನು ಹರಡುತ್ತಿದೆ. ಕಾಶ್ಮೀರಿಗಳಿಗೆ ತೊಂದರೆ ಉಂಟು ಮಾಡಲು ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದರು. ನಾವು ಅಲ್ಲಿ ಪಂಚಾಯಿತಿ ಚುನಾವಣೆ ನಡೆಸಿ, ಅಲ್ಲಿನ ಜನರಿಗೆ ಉದ್ಯೋಗ ಸೃಷ್ಟಿಸಿದ್ದೆವು. 
ಅಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ನಾವು ಈ ಕೆಲಸ ಮಾಡಿದ್ದೇವು, ಅಲ್ಲಿ ಶಾಂತಿಯಿದ್ದಾಗ ಪಾಕಿಸ್ತಾನ ಏನು ಮಾಡಲು ಸಾಧ್ಯವಿಲ್ಲ, ಪಾಕಿಸ್ತಾನ ಕಿರುಕುಳ ನೀಡಲು ಮೋದಿ ಸರ್ಕಾರ ಅವಕಾಶ ನೀಡುತ್ತಿದೆ. ನಾವು ಕಳೆದ 10 ವರ್ಷಗಳಲ್ಲಿ ಸ್ಥಾಪಿಸಿದ್ದ ಶಾಂತಿಯನ್ನು ಕೇಲಸ 1 ತಿಂಗಳಲ್ಲಿ ನಾಶ ಮಾಡಿದ್ದಾರೆ ಎಂದು ರಾಹುಲ್  ವಾಗ್ದಾಳಿ ನಡೆಸಿದ್ದಾರೆ.
ರಷ್ಯಾ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದೆ. ಜೊತೆಗೆ ಎಲ್ಲಾ ನೆರೆಹೊರೆಯ ರಾಷ್ಟ್ರಗಳಿಂದ ಪ್ರತ್ಯೇಕಗೊಳಿಸಲಾಗುತ್ತಿದೆ. ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಷ್ಯಾ ದೇಶ ಪಾಕಿಸ್ತಾನಕ್ಕೆ ಆಯುಧಗಳನ್ನು ಪೂರೈಸುವಂತಹ ಪ್ರಸಂಗ ನಿರ್ಮಿಸಿದೆ. ಭಾರತ ಹಾಗೂ ಭೂತಾನ್‌ ಯಾವಾಗಲೂ ಸ್ನೇಹದಿಂದ ಇದ್ದು, ಭೂತಾನ್‌ಗೆ ಏನಾದರೂ ಸಮಸ್ಯೆಯಾದರೆ, ಭಾರತ ಅವರ ರಕ್ಷಣೆಗೆ ಇರುತ್ತದೆ ಎಂದು ದ್ವಿಪಕ್ಷೀಯ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗ ಚೀನಾ ಸೈನಿಕರು ಭೂತಾನ್‌ ಗಡಿ ಪ್ರವೇಶ ಮಾಡಿದ್ದಾಗ ನಮ್ಮ ಸೈನಿಕರು ಅವರನ್ನು ತಡೆದಿದ್ದಾರೆ. ಚೀನಾ ಸೈನಿಕರು ಏಕೆ ಭೂತಾನ್ ಪ್ರವೇಶಿಸಿದರು ಎಂಬುದನ್ನು ಮೋದಿ ದೇಶದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೊರಾರ್ಜಿ ವಸತಿ ಶಾಲೆ ಹೆಸರು ಬದಲಿಸಲು ಸರ್ಕಾರದ ಆದೇಶ
ಮೊರಾರ್ಜಿ ದೇಸಾಯಿ ಶಾಲೆಗಳನ್ನ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಎಂದು ನಾಮಕರಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಈ ಬಗ್ಗೆ ಅಧಿಕೃತ ಸೂಚನೆ ಹೊರಬಿದ್ದಿದೆ. 
ಹೊಸದಾಗಿ ನಿರ್ಮಿಸಲಾಗುತ್ತಿರುವ ವಸತಿ ಶಾಲೆಗಳಿಗೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಎಂದು ಹೆಸರಿಡಲಾಗಿದೆ. 2016-17ನೇ ಸಾಲಿನಲ್ಲಿ 278 ವಸತಿ ಶಾಲೆಗಳು ಮಂಜೂರಾಗಿವೆ. ಅವೆಲ್ಲವಕ್ಕೂ ಈಗ ಇಂದಿರಾ ಹೆಸರಿಡಲಾಗುತ್ತಿದೆ. ಆದರೆ, ಹಾಲಿ ಇರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಮರುನಾಮಕರಣ ಮಾಡುವ ಪ್ರಕ್ರಿಯೆಯೂ ಆರಂಭವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್ ಸಿ ಅರುಣ್ ಶಹಾಪೂರ ಹೈಕಮಾಂಡ್ ಒಲೈಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಇಂತಹ ಅಗ್ಗದ ಗಿಮಿಕ್ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.