ಡಿನೋಟಿಫಿಕೇಷನ್ ಪ್ರಕರಣ: ಯಡಿಯೂರಪ್ಪ ವಿರುದ್ಧ 2 ಎಫ್ಐಆರ್
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಗರಾಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Published On :
ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಗರಾಭಿವೃದ್ಧಿ ಇಲಾಖೆಯ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಬೆಂಗಳೂರು ನಗರ ವಿಭಾಗದ ಎಸಿಬಿ ಅಧಿಕಾರಿಗಳು ಯಡಿಯೂರಪ್ಪ ಹಾಗೂ ಅವರ ಅಧಿಕಾರಾವಧಿಯಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಾಗಿದ್ದವರ ವಿರುದ್ಧ ಎಫ್ಐ ಆರ್ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 7, 8, 13(1)(c)(d) and 13(2) ಹಾಗೂ ಐಪಿಸಿ ಸೆಕ್ಷನ್ 406, 420 and 120(B) ಅಡಿಯಲ್ಲಿ ಖಾಸಗಿ ದೂರನ್ನು ಆಧರಿಸಿ 2 ಎಫ್ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲಿಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನಲ್ಲಿ ಡಾ. ಶಿವರಾಮ ಕಾರಂತ ಲೇಔಟ್ ಗಾಗಿ ವಶಪಡಿಸಿಕೊಳ್ಳಲಾಗಿದ್ದ 250 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಲು 2009-12 ರ ಅವಧಿಯಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ 20 ಆದೇಶ ಹೊರಡಿಸಿದ್ದರು ಎಂದು ಎಫ್ಐಆರ್ ನಲ್ಲಿ ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


