ಸ್ವಾತಂತ್ರ್ಯ ದಿನಾಚರಣೆಯಂದು ಕಾಂಗ್ರೆಸ್ ನಾಯಕನ ಅಸಭ್ಯ ವರ್ತನೆ: ವಿಡಿಯೋ ವೈರಲ್
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ ರಮೇಶ್ ಅವರು ವಿಧಾನ ಪರಿಷತ್ ಸದಸ್ಯೆಯೊಬ್ಬರ ಕೈಹಿಡಿದು ಅಸಭ್ಯವಾಗಿ ...

Published On :
ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಟಿ.ಪಿ ರಮೇಶ್ ಅವರು ವಿಧಾನ ಪರಿಷತ್ ಸದಸ್ಯೆಯೊಬ್ಬರ ಕೈಹಿಡಿದು ಅಸಭ್ಯವಾಗಿ ವರ್ತಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಡಿಕೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ. ರಮೇಶ್, ವೇದಿಕೆಯಲ್ಲಿದ್ದ ಶಾಸಕಿ ವೀಣಾ ಅಚ್ಚಯ್ಯ ಅವರ ಕೈ ಒತ್ತಿ ಹಿಡಿದಿದ್ದಾರೆ. ಈ ವೇಳೆ ಮುಜುಗರಕ್ಕೀಡಾದ ವೀಣಾ ಅಚ್ಚಯ್ಯ, ರಮೇಶ್ ಅವರ ಕೈಯ್ಯನ್ನು ಪಕ್ಕಕ್ಕೆ ಸರಿಸಿದ್ದಾರೆ.
ಈ ವಿಡಿಯೋ ಜಿಲ್ಲೆಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್. ಸೀತಾರಾಮ್ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕಿ ವೀಣಾ ಅಚ್ಚಯ್ಯ ಟಿ.ಪಿ ರಮೇಶ್ ವರ್ತನೆಯಿಂದ ಬೇಸರವಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ವರ್ತನೆ ಸರಿಯಲ್ಲ,ಯಾವ ಭಾವನೆಯಿಂದ ಹಾಗೆ ಮಾಡಿದರೆಂದು ನನಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಿದವರು. ಪ್ರತಿಯೊಬ್ಬ ಹೆಣ್ಣು ಮಕ್ಕಳನ್ನು ಗೌರವಿಸುವುದು ಎಲ್ಲರ ಕರ್ತವ್ಯ ಎಂದು ವೀಣಾ ಅಚ್ಚಯ್ಯ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಸಭ್ಯ ವರ್ತನೆmadikeriಮಡಿಕೇರಿmisbehaveಸ್ವಾತಂತ್ರ್ಯ ದಿನಾಚರಣೆVeena achaiahindependence day functionT P Rameshವೀಣಾ ಅಚ್ಚಯ್ಯಟಿ.ಪಿ ರಮೇಶ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


