ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ: ಉನ್ನತ ಅಧಿಕಾರಿಗಳಿಗೆ ಎನ್ ಜಿಟಿ ನೊಟೀಸ್
ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ...

Published On :
ನವದೆಹಲಿ: ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಪರಿಹಾರಕ್ಕೆ ಏನು ಕ್ರಮ ಕೈಗೊಂಡಿದ್ದೀರಾ ಹಾಗೂ ಕೆರೆಯನ್ನು ಸ್ವಚ್ಛಗೊಳಿಸಲು ಅನುಸರಿಸಿರುವ ಕ್ರಮಗಳ ಬಗ್ಗೆ ವಿವರಣೆ ಕೋರ ರಾಷ್ಟ್ರೀಯ ಹಸಿರು ಮಂಡಳಿ ರಾಜ್ಯದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ನೀಡಿದೆ.
ಎನ್ ಜಿಟಿ ಅಧ್ಯಕ್ಷ ಸ್ವತಂತ್ರ್ಯ ಕುಮಾರ್ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದು, ಆಗಸ್ಟ್ 22 ರ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.
ಇತ್ತೀಚೆಗೆ ಮತ್ತೆ ಬೆಳ್ಳಂದೂರು ಕೆರೆಯಲ್ಲಿ ನೊರೆ ಕಾಣಿಸಿಕೊಂಡ ಸಂಬಂಧ ವಿಚಾರಣೆ ವೇಳೆ ಎನ್ ಜಿ ಟಿ ನೊಟೀಸ್ ನೀಡಿದೆ.
ಕಳೆದ ವಾರ ಬಿದ್ದ ಭಾರಿ ಮಳೆಯಿಂದಾಗಿ ಬೆಳ್ಳಂದೂರು ಕೆರೆಯಲ್ಲಿ ಈಗಲೂ ನೊರೆ ಕಾಣಿಸಿಕೊಂಡಿದ್ದು, ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದರು.
ಮುಂದಿನ ವಿಚಾರಣೆ ವೇಳೆ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಾಗಬೇಕೆಂದು ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
noticeನೊಟೀಸ್National Green TribunalBellandur lakeಬೆಳ್ಳಂದೂರು ಕೆರೆTop Officialsರಾಷ್ಟ್ರೀಯ ಹಸಿರು ಮಂಡಳಿಉನ್ನತ ಅಧಿಕಾರಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


