ಯಡಿಯೂರಪ್ಪ ವಿರುದ್ಧ ಎಫ್ ಐ ಆರ್: ಎಸಿಬಿ ಹಾಗೂ ದೂರುದಾರನಿಗೆ ಹೈಕೋರ್ಟ್ ನೊಟೀಸ್
ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿಬಿ ಮತ್ತು ದೂರದಾರನಿಗೆ ...

Published On :
ಬೆಂಗಳೂರು: ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಎಸಿಬಿ ಮತ್ತು ದೂರದಾರನಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ.
ಕಾನೂನು ಬಾಹಿರ ಡಿ ನೋಟಿಫಿಕೇಶನ್ ಸಂಬಂಧ ತಮ್ಮ ವಿರುದ್ಧದ ಎಫ್ ಐಆರ್ ಅನ್ನು ವಜಾಗೊಳಿಸಬೇಕೆಂದು ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಎಸಿಬಿ ಮತ್ತು ದೂರುದಾರ ಖಾಸಗಿ ವಿವಿಯ ಮಾಜಿ ಉಪ ಕುಲಪತಿ ಡಾ.ಅಯ್ಯಪ್ಪ ಅವರಿಗೆ ನೊಟೀಸ್ ನೀಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಡಾ.ಶಿವರಾಮ ಕಾರಂತ ಬಡಾವಣೆಯ 257 ಎಕರೆ ಭೂಮಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿತ್ತು. ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ಎಫ್ ಐ ಆರ್ ದಾಖಲಿಸಿದ್ದರು.
ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯಲ್ಲಿ 20 ವಿವಿಧ ಆದೇಶಗಳನ್ನು ಹೊರಡಿಸಿ 250 ಎಕರೆ ಜಮೀನು ಡಿನೋಟಿಫಿಕೇಶನ್ ಗೆ ಆದೇಶಿಸಿದ್ದರು ಎಂದು ಡಾ.ಅಯ್ಯಪ್ಪ ದೂರು ಸಲ್ಲಿಸಿದ್ದರು.
ಯಡಿಯೂರಪ್ಪ ವಿರುದ್ಧದ ಈ ಪ್ರಕರಣ ಸಂಬಂಧ ಎಸಿಬಿ ಅಧಿಕಾರಿಗಳು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ನಾಲ್ವರು ಅಧಿಕಾರಿಗಳನ್ನು ಬಂಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಹೈಕೋರ್ಟ್noticeKarnataka High Courtಬಿ.ಎಸ್ ಯಡಿಯೂರಪ್ಪde-notificationಡಿ ನೋಟಿಫಿಕೇಷನ್ಭ್ರಷ್ಟಾಚಾರ ನಿಗ್ರಹ ದಳAnti Corruption BureauB.S Yeddyurappa
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


