ಸ್ವತಂತ್ರ್ಯ ಧರ್ಮದ ಮಾನ್ಯತೆ ಸಿಗುವವರೆಗೂ ಹೋರಾಟ ನಿಲ್ಲದು: ಲಿಂಗಾಯತ ಸಮುದಾಯ
ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು...

Published On :
ಬೆಳಗಾವಿ: ಲಿಂಗಾಯತ ಸಮುದಾಯಕ್ಕೆ ಸ್ವತಂತ್ರ ಧರ್ಮ ಮಾನ್ಯತೆ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ ಎಂದು ಬೆಳಗಾವಿ ನಗರದಲ್ಲಿ ನಡೆದ ಲಿಂಗಾಯತರ ಬೃಹತ್ ಸಮಾವೇಶದಲ್ಲಿ ಪ್ರತಿಜ್ಞೆ ಸ್ವೀಕರಿಸಲಾಯಿತು.
ಬೆಳಗಾವಿಯ ಲಿಂಗರಾಜ ಕಾಲೇಜು ಆವರಣದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು,ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಲಿಂಗಾಯತ ಸ್ವತಂತ್ರ್ಯ ಧರ್ಮ ಹೋರಾಟ ಸಮಿತಿ ಹೇಳಿದೆ.
ಸಿಎಂ ಸಿದ್ದರಾಮಯ್ಯ ಅವರ ಸಲಹೆ ಮೇರೆಗೆ ಸಮಿತಿ ಸದಸ್ಯರು ವೀರಶೈವ ಮಹಾಸಭಾ ಜೊತೆ ಚರ್ಚೆ ನಡೆಸಿತು. ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು, ಮತ್ತು ತೆಲಂಗಾಣದಿಂದ ಬಂದಿದ್ದ ಲಕ್ಷಾಂತರ ಮಂದಿ ಲಿಂಗಾಯತರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ಧರ್ಮದ ಘೋಷಣೆ ಕೂಗುತ್ತಿದ್ದ ಅವರು ಗಾಂಧಿ ಟೋಪಿ ಧರಿಸಿದ್ದರು.
ಜನರ ಮನಸ್ಸು ಮತ್ತು ಹೃದಯವನ್ನು ಬದಲಾಯಿಸುವ ನಂಬಿಕೆ ಲಿಂಗಾಯತ ಧರ್ಮ ಹೊಂದಿದೆ. ರಾಜ್ಯದಲ್ಲಿ ನೂರಾರು ಲಿಂಗಾಯತ ಮಠಗಳಿವೆ,ಅದರಲ್ಲಿ ಕೇವಲ 50 ರಷ್ಟು ಮಠಗಳು ಮಾತ್ರ ಬಸವಣ್ಣನವರ ತತ್ವಗಳನ್ನು ಅನುಸರಿಸುತ್ತಿವೆ, ಮಾತುಕತೆಯಿಂದ ಸಮಸ್ಯೆ ಬಗೆಹರಿಸಿಕೊಳ್ಳಬೇಕು, ಶತೃತ್ವದಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಹೇಳಿದ್ದಾರೆ.
ಎಲ್ಲರೂ ಒಗ್ಗಟ್ಟಾಗಿ ಸೇರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಮಹಸಭಾ ದವರ ಮನವೊಲಿಸಬೇಕು ಎಂದು, ಕೂಡಲ ಸಂಗಮ ಮಠದ ಬಸವರಾಜ ಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Belagavirallyseparate religionಪ್ರತ್ಯೇಕ ಧರ್ಮLingayat Swatantra Dharma Horata Samithiಲಿಂಗಾಯತ ಸ್ವತಂತ್ರ್ಯ ಧರ್ಮ ಹೋರಾಟ ಸಮಿತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


