ರಾಜ್ಯ

ಬೆಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಚಿಕಿತ್ಸೆ ಫಲಿಸದೇ 4 ವರ್ಷದ ಬಾಲಕಿ ಸಾವು

ಅಪ್ರಾಪ್ತೆ ಮೇಲೆ ವಿವಾಹಿತ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿರುವ ಘಟನೆ ...

ಬೆಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಚಿಕಿತ್ಸೆ ಫಲಿಸದೇ 4 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು:  ಅಪ್ರಾಪ್ತೆ ಮೇಲೆ  ವಿವಾಹಿತ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆಗಸ್ಟ್ 17 ರಂದು ನಾಲ್ಕು ವರ್ಷದ ಬಾಲಕಿ ಮೇಲೆ ಸಾಕು ತಂದೆ ಅತ್ಯಾಚಾರವೆಸಗಿದ್ದ. ಆನಂತರ ತೀವ್ರ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಬಾಲಕಿಯನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.  ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿಯು ಪರಿಚಿತರಾದ ಮಲ್ಲಿಕಾರ್ಜುನ್ ಮತ್ತು ಚಂದನಾ ಮನೆಯಲ್ಲಿ ವಾಸವಿದ್ದಳು. ದಂಪತಿ ಬಾಲಕಿಗೆ ಆಗಾಗ ಹಿಂಸೆ ನೀಡುತ್ತಿದ್ದರು. ಸರಿಯಾದ ಸಮಯಕ್ಕೆ ಬಾಲಕಿಗೆ ಊಟ ತಿಂಡಿ ನೀಡದೆ ಆಗಸ್ಟ್ 17ರಂದು ಬಾಲಕಿ ಮೇಲೆ ಹಲ್ಲೆ ನಡೆಸಿದ್ದರು. ಮನೆಯಲ್ಲಿ ಯಾರೂ ಇ‌ಲ್ಲದ ‌ವೇಳೆ ‌ತಿಂಡಿ ಕೊಡಿಸುವ ನೆಪದಲ್ಲಿ ‌ಸಾಕು ತಂದೆ ಮಲ್ಲಿಕಾರ್ಜುನ್‌ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.