ಬಿಡಿಎಯಲ್ಲಿ ಮುಖ್ಯಮಂತ್ರಿಗಳಿಗೆ ಅಧಿಕಾರವಿಲ್ಲದಿದ್ದರೂ, ಯಡಿಯೂರಪ್ಪ ಆದೇಶ ನೀಡಿದ್ದರು: ಎಸಿಬಿ
ನಗರದಲ್ಲಿರುವ ಡಾ.ಕೆ.ಶಿವರಾಮ್ ಕಾರಂತ್ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ...

Published On :
ಬೆಂಗಳೂರು: ನಗರದಲ್ಲಿರುವ ಡಾ.ಕೆ.ಶಿವರಾಮ್ ಕಾರಂತ್ ಬಡಾವಣೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿ-ನೋಟಿಫಿಕೇಶನ್ ಮಾಡಲು 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಭೂ ಮಾಲೀಕರಿಂದ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ ಆದೇಶಗಳನ್ನು ಹೊರಡಿಸಿದ್ದರು.
ನಂತರ ಮುಖ್ಯಮಂತ್ರಿಯಾದ ಡಿ.ವಿ.ಸದಾನಂದ ಗೌಡ, 2012ರಲ್ಲಿ ವಿಧಾನ ಮಂಡಲ ಅಧಿವೇಶನದ ವೇಳೆ ಶಿವರಾಮ ಕಾರಂತ ಬಡಾವಣೆ ಜಮೀನು ಡಿನೋಟಿಫಿಕೇಶನ್ ಕುರಿತು ಸಿಐಡಿ ತನಿಖೆ ನಡೆಸಲು ಆದೇಶಿಸುವುದಾಗಿ ಸದನಕ್ಕೆ ಭರವಸೆ ನೀಡಿದ್ದರು ಎಂದು ಭ್ರಷ್ಟಾಚಾರ ನಿಗ್ರಹ ದಳ ನಿನ್ನೆ ಹೈಕೋರ್ಟ್ ಗೆ ತಿಳಿಸಿದೆ.
ಕಾರಂತ ಬಡಾವಣೆ ಡಿ ನೋಟಿಫಿಕೇಶನ್ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎರಡು ಎಫ್ಐಆರ್ ಗಳ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಎಸಿಬಿ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ, ನಾಳೆಗೆ ವಿಚಾರಣೆ ಮುಂದೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧಿಸೂಚನೆಬಿ.ಎಸ್.ಯಡಿಯೂರಪ್ಪBDAಬಿಡಿಎnotificationACBಎಸಿಬಿB.S.YedyurappaDr.Shivaram Karanth layoutಡಾ.ಶಿವರಾಮ್ ಕಾರಂತ ಲೇಔಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


