ಕೆಪಿಸಿಸಿ ಕಾರ್ಯದರ್ಶಿ ಮುಳಗುಂದ್ ನಿವಾಸದ ಮೇಲೆ ಐಟಿ ರೈಡ್
ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಇಂಧನ ಸಚಿವ ಡಿಕೆಶಿ ಆಪ್ತ, ಕೆಪಿಸಿಸಿ ಕಾರ್ಯದರ್ಶಿ ವಿಜಯ್ ಮುಳಗುಂದ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.

Published On :
ಬೆಂಗಳೂರು: ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಐಟಿ ದಾಳಿ ಮುಂದುವರಿದಿದ್ದು ಇಂಧನ ಸಚಿವ ಡಿಕೆಶಿ ಆಪ್ತ, ಕೆಪಿಸಿಸಿ ಕಾರ್ಯದರ್ಶಿ ವಿಜಯ್ ಮುಳಗುಂದ್ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.
ಈ ಬೆಳವಣಿಗೆ ಕೈ ಪಾಳೆಯವನ್ನು ಆತಂಕಕ್ಕೆ ದೂಡಿದ್ದು ಇತ್ತೀಚೆಗೆ ನಡೆದ ಗುಜರಾತ್ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸಿದ್ದ ಗುಜರಾತ್ ಕಾಂಗ್ರೆಸ್ ನ ಶಾಸಕರ ಆತಿಥ್ಯವನ್ನು ಡಿಕೆಶಿ ಮತ್ತು ವಿಜಯ್ ಮುಳಗುಂದ್ ವಹಿಸಿಕೊಂಡಿದ್ದರು.
ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಕಾವೇರಿ ಹ್ಯಾಂಡ್ ಲೂಮ್ ಅಧ್ಯಕ್ಷರಾಗಿದ್ದ ಮುಖಗುಂದ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಇಂದು ಬೆಳಗ್ಗೆ ದಾಳಿ ಪ್ರಾರಂಭವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


