ಕಾನೂನು, ಸುವ್ಯವಸ್ಥೆ ಕಾಪಾಡಲು ಬೆಂಗಳೂರು ಪೊಲೀಸರ ಕಠಿಣ ಕ್ರಮ
ನಗರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಯಲು ಕರ್ತವ್ಯದಲ್ಲಿ ಇಲ್ಲದ ಅವಧಿ....

Published On :
ಬೆಂಗಳೂರು: ನಗರದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಯುವುದನ್ನು ತಡೆಯಲು ಕರ್ತವ್ಯದಲ್ಲಿ ಇಲ್ಲದ ಅವಧಿ ಸಂದರ್ಭದಲ್ಲಿ ಕೂಡ ಆರೋಪಿಗಳ ಮೇಲೆ ಶಕ್ತಿ ಪ್ರಯೋಗಿಸುವಂತೆ ನಗರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಅವರು, ಸಮಾಜ ವಿರೋಧಿ ಚಟುವಟಿಕೆ ನಡೆಸುವರಿಂದ ಕಾನೂನು, ಸುವ್ಯವಸ್ಥೆ ಮತ್ತು ಸಂಚಾರಿ ಪೊಲೀಸರು ತೊಂದರೆಗೀಡಾಗುತ್ತಿದ್ದು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಆಯುಕ್ತರು ಸೂಚಿಸಿದ್ದಾರೆ.
ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ ಪೆಕ್ಟ್ ರ್ ಕರ್ತವ್ಯದಲ್ಲಿದ್ದಾಗ ಆರೋಪಿಯೊಬ್ಬ ಹಲ್ಲೆ ನಡೆಸಿದ್ದು ಮತ್ತು ಆತನ ಸಹಚರರು ಇಬ್ಬರು ಪೊಲೀಸ್ ಅಧಿಕಾರಿ ಮೇಲೆ ಶಸ್ತ್ರಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬಳಿಕ ಪೊಲೀಸ್ ಆಯುಕ್ತರು ಈ ಸೂಚನೆ ನೀಡಿದ್ದಾರೆ.
ಆರೋಪಿಗಳು ಸಾರ್ವಜನಿಕರಿಗೆ ತೊಂದರೆ ನೀಡುವುದು ಕಂಡುಬಂದರೆ ಪೊಲೀಸರು ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲಿ ಕೂಡ ಕ್ರಮ ಕೈಗೊಳ್ಳಲು ಹಿಂಜರಿಯುವುದು ಬೇಡ ಎಂದು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


