ರಾಜ್ಯ

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ಆಕ್ರೋಶ: ಕಾಂಗ್ರೆಸ್ ನಿಂದ ವಜಾಗೊಳಿಸುವಂತೆ ಆಗ್ರಹ

ಮಹಾರಾಷ್ಟ್ರ ಪರ ಹೇಳಿಕೆ ನೀಡಿರುವ ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು 24 ಗಂಟೆಗಳೊಳಿಸದಿದ್ದರೇ ರಾಜ್ಯಾದ್ಯಂತ ...

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ಆಕ್ರೋಶ: ಕಾಂಗ್ರೆಸ್ ನಿಂದ ವಜಾಗೊಳಿಸುವಂತೆ ಆಗ್ರಹ
ಲಕ್ಷ್ಮಿ ಹೆಬ್ಬಾಳ್ಕರ್
Published On :
ಬೆಂಗಳೂರು: ಮಹಾರಾಷ್ಟ್ರ ಪರ ಹೇಳಿಕೆ ನೀಡಿರುವ ಮಹಿಳಾ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು 24 ಗಂಟೆಗಳೊಳಿಸದಿದ್ದರೇ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿವೆ. 
ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಿ, ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕನ್ನಡ ಒಕ್ಕೂಟಗಳ ಅಧ್ಯಕ್ಷ ಸಾರಾ ಗೋವಿಂದ್‌ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಲಕ್ಷ್ಮೀ ಹೆಬ್ಬಾಳ್ಕರ್‌ ಅವರನ್ನು 24 ಗಂಟೆಯೊಳಗೆ ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸದಿದ್ದರೆ ಕನ್ನಡ ಒಕ್ಕೂಟಗಳ ವತಿಯಿಂದ ಶುಕ್ರವಾರ ರಾಜ್ಯದಾದ್ಯಂತ ಹೋರಾಟ ನಡೆಸುತ್ತೇವೆ. ಬೆಳಗಾವಿಯಿಂದಲೇ ಹೋರಾಟ ಪ್ರಾರಂಭಿಸುತ್ತೇವೆ ಎಂದು ಸಾರಾ ಗೋವಿಂದು ಕೆಪಿಸಿಸಿ ಕಾರ್ಯಾಧ್ಯಕ್ಷ ‌ದಿನೇಶ್ ಗುಂಡೂರಾವ್ ಅವರಿಗೆ ತಿಳಿಸಿದ್ದಾರೆ. ಶೀಘ್ರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಬೆಳಗಾವಿಯಲ್ಲಿ ಕನ್ನಡ ಒಕ್ಕೂಟಗಳಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಿಗಿಂತ ಮೊದಲು‌ ನಾನು ಜೈಮಹಾರಾಷ್ಟ್ರ ಎಂದು ಹೇಳುವೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಈ ಹೇಳಿಕೆ ವಿವಾದ ಸೃಷ್ಟಿಸಿದ್ದರು, ಇದೇ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದ ಆಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಹೀಗೆ ಹೇಳಿದ್ದಾರೆ ಎಂದು ನನಗನಿಸುವುದಿಲ್ಲ, ಇದರಿ ಹಿಂದೆ ಪಿತೂರಿ ಇರಬಹುದು ಎಂದು ಅನುಮಾನ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.