ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸ್ವಾಗತ ಕೇಂದ್ರ ಸ್ಥಾಪನೆ
ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.

Published On :
ಬೆಂಗಳೂರು: ಸಾರ್ವಜನಿಕರ ಸಮಸ್ಯೆ ಆಲಿಸುವುದಕ್ಕಾಗಿ ಶೀಘ್ರದಲ್ಲೇ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ತರಬೇತಿ ಪಡೆದ ಸ್ವಾಗತಕಾರರ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಪೊಲೀಸ್ ಠಾಣೆಗಳನ್ನು ಸಾರ್ವಜನಿಕ ಸ್ನೇಹಿಯಾಗಿ ಮಾಡುವ ಉದ್ದೇಶದಿಂದ 'ಜನ ಸ್ನೇಹಿ ಪೊಲೀಸ್ ಯೋಜನೆ' ಅಡಿ ಡಿಸೆಂಬರ್ 31ರೊಳಗೆ ಎಲ್ಲಾ ಪೊಲೀಸ್ ಠಾಣೆಯಲ್ಲಿ ಸ್ವಾಗತ ಕೇಂದ್ರ ಸ್ಥಾಪಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್ ರಾಜು ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಸ್ವಾಗತಕಾರರ ಕೇಂದ್ರ ಸ್ಥಾಪಿಸಿದ ಬಗ್ಗೆ ಫೋಟೋ ಸಮೇತ ವರದಿ ಮಾಡುವಂತೆ ಸೂಚಿಸಿದ್ದಾರೆ.
ಪೊಲೀಸ್ ಇಲಾಖೆ ಬಗ್ಗೆ ಸಾರ್ವಜನಿಕರಲ್ಲಿ ಇರಬಹುದಾದ ಅಪನಂಬಿಕೆ ತೊಡೆದು ಹಾಕಿ ಅವರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಪ್ರತಿ ಠಾಣೆಯಲ್ಲಿ 3ರಿಂದ 4 ಸಿಬ್ಬಂದಿಗೆ ಮೃದು ಕೌಶಲ್ಯಗಳ ಬಗ್ಗೆ ಎರಡು ದಿನ ತರಬೇತಿ ನೀಡಲಾಗುತ್ತಿದೆ.
ಪ್ರತಿ ಸ್ವಾಗತ ಕೇಂದ್ರದಲ್ಲಿ ‘May I Help You’ ಎಂಬ ಬೋರ್ಡ್ ಅನ್ನು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಹಾಕಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರು ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


