ರಾಜ್ಯ

ಯದುವೀರ್ ಒಡೆಯರ್-ತ್ರಿಷಿಕಾ ದಂಪತಿಗೆ ಗಂಡು ಮಗು ಜನನ: ಮೈಸೂರು ರಾಜಮನೆತನಕ್ಕೆ ಯುವರಾಜನ ಆಗಮನ

ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಡಿ.6 ರಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಯದುವೀರ್ ಒಡೆಯರ್-ತ್ರಿಷಿಕಾ ದಂಪತಿಗೆ ಗಂಡು ಮಗು ಜನನ: ಮೈಸೂರು ರಾಜಮನೆತನಕ್ಕೆ ಯುವರಾಜನ ಆಗಮನ
ಯದುವೀರ್ ಒಡೆಯರ್-ತ್ರಿಷಿಕಾ
Published On :
ಬೆಂಗಳೂರು: ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಕುಮಾರಿ ಡಿ.6 ರಂದು ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. 
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ಅವರಿಗೆ ಹೆರಿಗೆಯಾಗಿದ್ದು, ಮೈಸೂರು ಸಂಸ್ಥಾನಕ್ಕೆ ಉತ್ತರಾಧಿಕಾರಿಯ ಆಗಮನವಾಗಿದೆ. 2015 ರಲ್ಲಿ ರಾಜಮಾತೆ ಪ್ರಮೋದಾ ದೇವಿ ಅವರು ಯದುವೀರ್ ಅವರನ್ನು ದತ್ತು ಸ್ವೀಕರಿಸಿ ಮೈಸೂರು ಸಂಸ್ಥಾನದ ರಾಜವಂಶದ ಉತ್ತರಾಧಿಕಾರಿಯನ್ನಾಗಿಸಿದ್ದರು. 2016 ರ ಜೂನ್ 27 ರಂದು ಯದುವೀರ್ ರಾಜಸ್ಥಾನ ರಾಜ ಕುಟುಂಬದ ತ್ರಿಷಿಕಾ ಕುಮಾರಿ ಅವರನ್ನು ವಿವಾಹವಾಗಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.