ಸರ್ಕಾರಿ ಭೂಮಿ ಕಬಳಿಕೆ, ಸಚಿವ ಜಾರ್ಜ್ ವಿರುದ್ಧ ದೂರು ದಾಖಲು
ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿಬಂದಿದೆ.
Published On :
ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಮತ್ತೊಂದು ಭೂ ಕಬಳಿಕೆ ಆರೋಪ ಕೇಳಿಬಂದಿದೆ.
ಇದರ ಸಂಬಂಧ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಜಾರ್ಜ್ ವಿರುದ್ಧ ಲೋಕಾಯುಕ್ತ, ಎಸಿಬಿ ಹಾಗೂ ಬಿಎಂಟಿಎಫ್ ನಲ್ಲಿ ದೂರು ದಾಖಲಿಸಿದ್ದಾರೆ.
ಜಾರ್ಜ್ ಪಾಲುದಾರಿಕೆಯ ಎಂಬೆಸಿ ಗಾಲ್ಫ್ ಲಿಂಕ್ ಟೆಕ್ ಪಾರ್ಕ್ ಹೆಸರಿನಲ್ಲಿ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಭೂಮಿಯನ್ನು ಕಬಳಿಸಿರುವುದಾಗಿ ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ೈದಕ್ಕೆ ಸಂಬಂಧಿಸಿದಂತೆ 600 ಪುಟಗಳ ದಾಖಲೆ ಬಿಡುಗಡೆ ಮಾಡಿದ ಅವರು ಜಾರ್ಜ್, ಟೆಕ್ ಪಾರ್ಕ್ ಹೆಸರಿನಲ್ಲಿ . 52.03 ಎಕರೆ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಬಳಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೆ.ಜೆ ಜಾರ್ಜ್KJ Georgeland grabbingNR Rameshಭೂ ಕಬಳಿಕೆಎನ್.ಆರ್. ರಮೇಶ್Embassy Golf Link tech parkಎಂಬೆಸಿ ಗಾಲ್ಫ್ ಲಿಂಕ್ ಟೆಕ್ ಪಾರ್ಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

