ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿನ ಅಕ್ರಮ ಮನೆಗಳ ಸಕ್ರಮ: ಕಾಗೋಡು ತಿಮ್ಮಪ್ಪ
ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಕಟ್ಟಿರುವ ಮನೆಗಳನ್ನು....

Published On :
ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಕಟ್ಟಿರುವ ಮನೆಗಳನ್ನು ಮಾರ್ಚ್ ಅಂತ್ಯದೊಳಗಾಗಿ ಸಕ್ರಮಗೊಳಿಸಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು ಇಪ್ಪತ್ತೈದು ಲಕ್ಷ ಮಂದಿ ಸರ್ಕಾರಿ ಭೂಮಿಯಲ್ಲಿ ಆಕ್ರಮವಾಗಿ ಮನೆ ಕಟ್ಟಿಕೊಂಡಿದ್ದಾರೆ ಎಂಬ ಅಂದಾಜಿದ್ದು, ಮಾರ್ಚ್ ಅಂತ್ಯದೊಳಗಾಗಿ ಅವರೆಲ್ಲರಿಗೂ ವಾಸಿಸುತ್ತಿರುವ ಮನೆಯ ಹಕ್ಕು ಪತ್ರಗಳನ್ನು ನೀಡಲಾಗುವುದು ಎಂದು ಹೇಳಿದರು.
ಆಕ್ರಮ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಗಡುವನ್ನು ಪುನ: ವಿಸ್ತರಿಸಲಾಗಿದ್ದು ಫೆಬ್ರವರಿ ಅಂತ್ಯದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
ಗ್ರಾಮೀಣ ಅಕ್ರಮ-ಸಕ್ರಮ (94ಸಿ), ಬಗರ್‌ಹುಕುಂ ಸಾಗುವಳಿ ಚೀಟಿ, ವಾಸಿಸುವವನೇ ಮನೆಯೊಡೆಯ ಅರ್ಜಿಗಳನ್ನು ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಮಾರ್ಚ್ 31ರ ಗಡುವು ವಿಧಿಸಲಾಗಿದೆ ಎಂದು ಕೂಡ ಹೇಳಿರುವ ಕಾಗೋಡು ತಿಮ್ಮಪ್ಪ, ಈ ನಿಟ್ಟಿನಲ್ಲಿ ಜಿಲ್ಲಾವಾರು ಸಭೆಗಳನ್ನು ನಡೆಸಲು ಇದೇ 15ರ ಬಳಿಕ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸರ್ಕಾರಿ ಜಮೀನುKagodu thimmappaಕಾಗೋಡು ತಿಮ್ಮಪ್ಪಗ್ರಾಮೀಣ ಪ್ರದೇಶrural areaGovernment LandIllegal houseಅಕ್ರಮ ಮನೆಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


