ರಾಜ್ಯ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಸನ್ನಿ ಲಿಯೋನ್ ವಿರುದ್ಧ ಕರವೇ ಕಾರ್ಯಕರ್ತರ ಪ್ರತಿಭಟನೆ

ಹೊಸ ವರ್ಷಾಚರಣೆ ಹಿನ್ನಲೆ ಡಿಸೆಂಬರ್ 31ರಂದು ಬಾಲಿವುಡ್ ಹಾಟ್ ನಟಿ ಸನ್ನಿ ಲಿಯೋನ್ ಬೆಂಗಳೂರಿಗೆ ಆಗಮಿಸುತ್ತಿದ್ದು ಇದನ್ನು ವಿರೋಧಿ ಕರ್ನಾಟಕ ರಕ್ಷಣಾ ವೇದಿಕೆ...

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ: ಸನ್ನಿ ಲಿಯೋನ್ ವಿರುದ್ಧ ಕರವೇ ಕಾರ್ಯಕರ್ತರ ಪ್ರತಿಭಟನೆ
ಪ್ರತಿಭಟನೆ
Published On :
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನಲೆ ಡಿಸೆಂಬರ್ 31ರಂದು ಬಾಲಿವುಡ್ ಹಾಟ್ ನಟಿ ಸನ್ನಿ ಲಿಯೋನ್ ಬೆಂಗಳೂರಿಗೆ ಆಗಮಿಸುತ್ತಿದ್ದು ಇದನ್ನು ವಿರೋಧಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 
ಡಿಸೆಂಬರ್ 31ರಂದು ಮಧ್ಯ ರಾತ್ರಿ ಇವೆಂಟ್ ವೊಂದನ್ನು ಆಯೋಜಿಸಿ ಅದಕ್ಕೆ ಸನ್ನಿ ಲಿಯೋನ್ ರನ್ನು ಕರೆಸಲಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರವೇ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಸನ್ನಿ ಲಿಯೋನ್ ವಿರುದ್ಧ ಪ್ರತಿಭಟನೆ ನಡೆಸಿ ಆಕೆಯ ಭಾವಚಿತ್ರಗಳನ್ನು ಸುಟ್ಟು ಪ್ರತಿಭಟನೆ ನಡೆಸಿದರು. 
ಬೆಂಗಳೂರಿಗೆ ಸನ್ನಿ ಲಿಯೋನ್ ರನ್ನು ಕರೆಸುವ ಮೂಲಕ ಕನ್ನಡ ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಈ ಕೂಡಲೇ ಕಾರ್ಯಕ್ರಮವನ್ನು ರದ್ದು ಮಾಡುವಂತೆ ಆಗ್ರಹಿಸಿದರು. 
ಅದಾಗಲೇ ಇನ್ಫೋಟೆಕ್ ಮತ್ತು ಬಯೋಟೆಕ್ ಕಂಪನಿಗಳು ಸನ್ನಿ ಲಿಯೋನ್ ಕಾರ್ಯಕ್ರಮ ಟಿಕೆಟ್ ಗಳನ್ನು ಮಾರಾಟ ಮಾಡಿವೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.