ಕಾಸರಗೋಡು: ಮಂಡ್ಯ ಅಯ್ಯಪ್ಪ ಭಕ್ತರ ಬಸ್ ಮೇಲೆ ಕಲ್ಲು ತೂರಾಟ, ಬಸ್ ಮುಂಭಾಗದ ಗಾಜು ಜಖಂ
ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

Published On :
ಕಾಸರಗೋಡು: ಮಂಡ್ಯದಿಂದ ಶಬರಿಮಲೆಗೆ ತೆರಳುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರ ಬಸ್ಸಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ. ಸದ್ಯ ಮಂಡ್ಯದ ಭಕ್ತರಿಗೆ ಕಾಸರಗೋಡಿನ ಅಯ್ಯಪ್ಪ ಸೇವಾ ಸಂಘದಲ್ಲಿ ಆಶ್ರಯ ನೀಡಲಾಗಿದೆ.
ಕರಾಳ ದಿನ ಆಚರಣೆ
ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸವಾಗಿ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಕರಾಳ ದಿನ ಆಚರಿಸಲಾಗಿದೆ. ಈ ವೇಳೆ ಕರ್ನಾಟಕದಿಂದ ಕೇರಳ ಹಾಗೂ ಕೇರಳದಿಂದ ಕರ್ನಾಟಕದತ್ತ ಬರುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್, ಇತರೆ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕರಾಳ ದಿನ ಹಿನ್ನೆಲೆಯಲ್ಲಿ ಮುಸ್ಲಿಮ್ ಸಂಘಟನೆಯೊಂದರ ಕಾರ್ಯಕರ್ತರು ಈ ಕೃತ್ಯ ಎಸಗಿದ್ದಾರೆಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


