ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್
ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ.......

Published On :
ಮೈಸೂರು: ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಅವರ ವಿರುದ್ಧ ಮೈಸೂರು ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೈಸೂರು ಜಿಲ್ಲೆಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಸವರಾಜ ನಾಯ್ಕ ರಿಂದ ಸಲ್ಲಿಸಲಾದ ಅರ್ಜಿಯೊಂದನ್ನು ಅನುಸರಿಸಿ ಪೋಲೀಸರು ಕ್ರಮ ತೆಗೆದುಕೊಳ್ಳುವಂತೆ ನ್ಯಾಯಾಲಯ ಸೂಚನೆ ನೀಡಿದೆ. ನವೆಂಬರ್ 25 ರಂದು ದೇವರಾಜ ಪೊಲೀಸ್ ಠಾಣೆಯಲ್ಲಿ ನಾಯ್ಕ, ಹೆಗಡೆ ವಿರುದ್ಧ ದೂರು ಸಲ್ಲಿಸಿದ್ದರು. ಪೊಲೀಸ್ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪಾಳ್ಯ ಸುರೇಶ್ ನೇತೃತ್ವದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ವಕೀಲರ ಸಮಿತಿಯು ನವೆಂಬರ್ 30 ರಂದು ನಾಲ್ಕನೇ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದೆ.
ಫಿರ್ಯಾದಿ ಪರವಾಗಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೂರುಗಳ ಆಧಾರದ ಮೇಲೆ ಮತ್ತಷ್ಟು ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಿದರು. ಅಂತೆಯೇ, ಪೊಲೀಸರು ಐಪಿಸಿ ಸೆಕ್ಷನ್ 153 (ಎ) ಮತ್ತು 504 ಅಡಿಯಲ್ಲಿ ಸಂಸದರ ವಿರುದ್ಧ ಎಫ್ ಐಆರ್ (ಸಂಖ್ಯೆ-230/2017) ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chief minister siddaramaiahಮುಖ್ಯಮಂತ್ರಿ ಸಿದ್ದರಾಮಯ್ಯFIRಎಫ್ ಐಆರ್Union Minister Anantkumar HegdeKitturBJP Parivartana rallyಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಕಿತ್ತೂರುಬಿಜೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


