ರಾಜ್ಯ

ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಅನಿಲ್ ಲಾಡ್ ವಿರುದ್ಧ ಎಫ್​ ಐಆರ್ ದಾಖಲು

ಬಳ್ಳಾರಿ ಶಾಸಕ ಅನಿಲ್ ಲಾಡ್ ಮಾಲೀಕತ್ವದ ಕೆನರಾ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಅಕ್ರಮ ಗಣಿಗಾರಿಕೆ ನಡೆದಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಎಫ್​ ಐಆರ್ ದಾಖಲಿಸಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ: ಶಾಸಕ ಅನಿಲ್ ಲಾಡ್ ವಿರುದ್ಧ ಎಫ್​ ಐಆರ್ ದಾಖಲು
ಶಾಸಕ ಅನಿಲ್ ಲಾಡ್
Published On :
ಬೆಂಗಳೂರು: ಬಳ್ಳಾರಿ ಶಾಸಕ ಅನಿಲ್ ಲಾಡ್ ಮಾಲೀಕತ್ವದ ಕೆನರಾ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಿಂದ ಅಕ್ರಮ ಗಣಿಗಾರಿಕೆ ನಡೆದಿರುವ ಆರೋಪದ ಮೇಲೆ ಶಾಸಕರ ವಿರುದ್ಧ ಎಫ್​ ಐಆರ್ ದಾಖಲಿಸಲಾಗಿದೆ.
ಅಕ್ರಮವಾಗಿ ಅದಿರು ಸಾಗಾಟ ನಡೆಸಿದ ಆರೋಪದದಡಿಯಲ್ಲಿ ಎಸ್‍ಐಟಿ ಎಫ್ ಐಆರ್ ದಾಖಲಿಸಿದೆ. 2010 ರಿಂದ 2 ವರ್ಷಗಳ ಕಾಲ ಪರವಾನಿಗೆ ಪಡಿಯದೇ 82 ಸಾವಿರ ಮೆಟ್ರಿಕ್  ಟನ್ ಅದಿರನ್ನು ಸಾಗಿಸಿದ ಸಂಬಂಧ ಪ್ರಕರಣ ದಾಖಲಾಗಿದೆ. 
ಇದೀಗ ಪ್ರಕರಣ ದಾಖಲಿಸಿದ ಸ್ಐಟಿ ಐಜಿಪಿ ಚರಣ್ ರೆಡ್ಡಿ  ದಾಖಲೆಗಳ ಸಂಗ್ರಹದಲ್ಲಿ ತೊಡಗಿದ್ದು ಒಟ್ಟಾರೆ 13 ಕೋಟಿ ರೂ. ಅಕ್ರಮ ನಡೆದಿದೆ ಎನ್ನಲಾಗಿದೆ.
ಬೇಲೆಕೇರಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಅನಿಲ್ ಲಾಡ್ 2015ರ ಜುಲೈನಲ್ಲಿ ಸಿಬಿಐನಿಂದ ಬಂಧನಕ್ಕೊಳಗಾಗಿದ್ದರು. ಇದೀಗ ಮತ್ತೊಂದು ಪ್ರಕರಣದಲ್ಲಿಯೂ ಸಿಲುಕಿರುವ ಲಾಡ್ ರಿಂದಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಗೆ ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ತೀವ್ರ ಮುಜುಗರ ತಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.