ಲೋಕಾಯುಕ್ತದಲ್ಲಿ ಭ್ರಷ್ಟಾಚಾರ: 5.3 ಕೋಟಿ ರೂ.ಮೌಲ್ಯದ ಆಸ್ತಿ ದಾಖಲೆಯನ್ನು ಲಗತ್ತಿಸಿದ ಇಡಿ
ಕರ್ನಾಟಕ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ....

Published On :
ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ವಿ.ಭಾಸ್ಕರ್ ಅವರಿಗೆ ಸೇರಿದ್ದು ಎನ್ನಲಾದ 5.3 ಕೋಟಿ ರೂಪಾಯಿ ಆಸ್ತಿ ಮೊತ್ತದ ದಾಖಲೆಗಳನ್ನು ಜಾರಿ ನಿರ್ದೇಶನಾಲಯ ಜಾರಿ ನಿರ್ದೇಶನಾಲಯ ಲಗತ್ತಿಸಿದೆ.
ನಿನ್ನೆ ಜಾರಿ ನಿರ್ದೇಶನಾಲಯ ಹೊರಡಿಸಿರುವ ಹೇಳಿಕೆ ಪ್ರಕಾರ, ಕರ್ನಾಟಕ ಲೋಕಾಯುಕ್ತದಲ್ಲಿ ಕೇಳಿಬಂದ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಪಟ್ಟಂತೆ ಅಕ್ರಮ ಹಣ ವರ್ಗಾವಣೆ ಕೇಸನ್ನು ವಿಶೇಷ ತನಿಖಾ ತಂಡ ದಾಖಲಿಸಿತ್ತು. ಅಂದಿನ ಲೋಕಾಯುಕ್ತ ವಿ,ಭಾಸ್ಕರ್ ಅವರ ಪುತ್ರ ವೈ.ಅಶ್ವಿನ್, ನ್ಯಾಯಮೂರ್ತಿ ಭಾಸ್ಕರ್ ರಾವ್ ಮತ್ತು ಇತರರ ವಿರುದ್ಧ ವಿಶೇಷ ತನಿಖಾ ತಂಡ ನಾಲ್ಕು ಆರೋಪಪಟ್ಟಿ ಸಲ್ಲಿಸಿತ್ತು. ಈ ಹಿಂದೆ ಅಕ್ರಮ ಹಣ ವರ್ಗಾವಣೆ ತಡೆಗಟ್ಟುವ ಕಾಯ್ದೆಯಡಿ(ಪಿಎಂಎಲ್ಎ) 6.2 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳ ದಾಖಲೆಗಳನ್ನು ಒದಗಿಸಿತ್ತು.
ಪಿಎಂಎಲ್ಎ ಕಾಯ್ದೆಯಡಿ ಹೆಚ್ಚಿನ ವಿಚಾರಣೆ ನಡೆಸಿದ ಸಂದರ್ಭದಲ್ಲಿ ವಿ.ಭಾಸ್ಕರ್ ಅವರು 5.3 ಕೋಟಿ ರೂಪಾಯಿ ಮೌಲ್ಯದ ಹೆಚ್ಚುವರಿ ಆಸ್ತಿಗಳನ್ನು ಹೊಂದಿದ್ದಾರೆ. ಅದನ್ನು ಕ್ರಿಮಿನಲ್ ಪಿತೂರಿ, ಬೆದರಿಕೆ ಮತ್ತು ಸುಲಿಗೆ ಮೂಲಕ ಅನೇಕ ಸರ್ಕಾರಿ ಅಧಿಕಾರಿಗಳಿಂದ ಸಹ ಆರೋಪಿಗಳ ಜೊತೆ ಸೇರಿ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿರುವ ಪ್ರಸ್ತುತ ಮಾರುಕಟ್ಟೆ ಮೊತ್ತದಲ್ಲಿ 2.6 ಕೋಟಿ ರೂಪಾಯಿ ಮೌಲ್ಯದ ಆರು ವಾಣಿಜ್ಯ ಮತ್ತು ವಸತಿ ಆಸ್ತಿಗಳನ್ನು ಹಾಗೂ ವಿವಿಧ ಬ್ಯಾಂಕುಗಳಲ್ಲಿ 2.75 ಕೋಟಿ ರೂಪಾಯಿ ಹಣ ಠೇವಣಿಯಿಡಲಾಗಿದೆ ಎಂಬ ಬಗ್ಗೆ ದಾಖಲೆಗಳನ್ನು ಕೂಡ ನೀಡಿದೆ. ಒಟ್ಟಾರೆ ಜಾರಿ ನಿರ್ದೇಶನಾಲಯ ತೋರಿಸಿದ ದಾಖಲೆಗಳಲ್ಲಿ ಆಸ್ತಿ ಮೌಲ್ಯ ಒಟ್ಟಾರೆಯಾಗಿ 11.5 ಕೋಟಿಯಷ್ಟಾಗಿದೆ. ಪಿಎಂಎಲ್ಎ ಕಾಯ್ದೆಯಡಿ ವಿಚಾರಣೆ ಮುಂದುವರಿಯಲಿದೆ ಎಂದು ನಿರ್ದೇಶನಾಲಯ ತಿಳಿಸಿದೆ.
ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ವಿರುದ್ಧ ವಿಶೇಷ ತನಿಖಾ ತಂಡ ಆರೋಪಪಟ್ಟಿ ಸಲ್ಲಿಸಿತ್ತು. ಅಲ್ಲಿಂದ ನಂತರ ಭಾಸ್ಕರ್ ರಾವ್ ಲೋಕಾಯುಕ್ತ ಹುದ್ದೆಗೆ ರಾಜಿನಾಮೆ ನೀಡಿದ್ದರು. ಈ ಎಲ್ಲಾ ಕೇಸುಗಳ ವಿಚಾರಣೆ ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್ ನಲ್ಲಿ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


