ರಾಜ್ಯ

ಸುಪಾರಿ ಪ್ರಕರಣ: ರವಿ ಬೆಳಗೆರೆಗೆ ಜೈಲಾ? ಬೇಲಾ? ಇಂದು ನಿರ್ಧಾರ

ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರ ಪೊಲೀಸ್ ....

ಸುಪಾರಿ ಪ್ರಕರಣ: ರವಿ ಬೆಳಗೆರೆಗೆ ಜೈಲಾ? ಬೇಲಾ? ಇಂದು ನಿರ್ಧಾರ
ಪೊಲೀಸ್ ಕಸ್ಟಡಿಯಲ್ಲಿರುವ ರವಿ ಬೆಳಗೆರೆ
Published On :
ಬೆಂಗಳೂರು: ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
ಆದರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿ ಬೆಳಗೆರೆಯಿಂದ ಹೆಚ್ಚಿನ ಮಾಹಿತಿ ಪೊಲೀಸರಿಗೆ ಸಿಗದಿರುವುದರಿಂದ ಇನ್ನು ಕೆಲ ದಿನಗಳವರೆಗೆ ಪೊಲೀಸ್ ಕಸ್ಟಡಿ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.ಸಿಸಿಬಿ ಅಕ್ರಮ ಶಸ್ತ್ರಾಸ್ತ್ರ, ಕೊಲೆ ಸಂಚು ಸೇರಿ ಇನ್ನಿತರ ಜಾಮೀನು ರಹಿತ ಸೆಕ್ಷನ್ ಹಾಕಿದ್ದಾರೆ. 
ರವಿ ಬೆಳಗೆರೆ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅವರು ಬಿ.ಪಿ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವುದರಿಂದ ಅನಾರೋಗ್ಯದ ಕಾರಣ ನೀಡಿ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು.
'' ಬಂಧನಕ್ಕೆ ಸಂಬಂಧಪಟ್ಟ ಕೆಲ  ದಾಖಲೆಗಳು ನಮ್ಮ ಕೈಸೇರಿಲ್ಲ. ಇಂದು ಸಂಜೆ ವೇಳೆಗೆ ದಾಖಲೆಗಳು ಕೈ ಸೇರಿದರೆ ಜಾಮೀನಿಗೆ ಅರ್ಜಿಸಲ್ಲಿಸಲಾಗುವುದು'' ಎಂದು ರವಿ ಬೆಳಗೆರೆ ಪರ ವಕೀಲ ದಿವಾಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.